ಆರಂಭಿಕರಾದ ನಾಯಕ ಶುಭಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಸಿಡಿಸಿದ ಶತಕಗಳ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ 35 ರನ್ ಗಳ ಭಾರೀ ಅಂತರದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಅಹಮದಾಬಾದ್ ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 231 ರನ್ ಸಂಪಾದಿಸಿತು. ಕಠಿಣ ಗುರಿ ಬೆಂಬತ್ತಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 196 ರನ್ ಗಳಿಸಲಷ್ಟೇ ಶಕ್ತವಾಯಿತು.
ಚೆನ್ನೈ ತಂಡ 10 ರನ್ ಗೆ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತದಿಂದ ತತ್ತರಿಸಿತು. ಈ ಹಂತದಲ್ಲಿ ಮೊಯಿನ್ ಅಲಿ ಮತ್ತು ಡ್ರೈಲ್ ಮಿಚೆಲ್ ಅರ್ಧಶತಕ ಬಾರಿಸಿದ್ದೂ ಅಲ್ಲದೇ 4ನೇ ವಿಕೆಟ್ ಗೆ 109 ರನ್ ಜೊತೆಯಾಟದಿಂದ ಗೆಲುವಿನ ಆಸೆ ಮೂಡಿಸಿದರು.