Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್
ರಾಜ್ಯ

ವಕ್ಫ್ ತಿದ್ದುಪಡಿ ಮಸೂದೆ ಬೆಂಬಲಿಸಿ ಹೆಚ್.ಡಿ. ದೇವೇಗೌಡ ರಾಜ್ಯಸಭೆಯಲ್ಲಿ ಭಾಷಣ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 24 ವೀಕ್ಷಣೆಗಳು
hd devegowda
hd devegowda

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮ್ ಸಮುದಾಯದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪ್ರತಿಪಾದಿಸಿದ್ದಾರೆ.

ಲೋಕಸಭೆಯಲ್ಲಿ ನಿನ್ನೆ ತಡರಾತ್ರಿ ಮಸೂದೆ ಪಾಸಾದ ನಂತರ ರಾಜ್ಯಸಭೆಯಲ್ಲಿ ಗುರುವಾರ ಮಂಡಿಸಲಾಗಿದ್ದು, ಈ ವೇಳೆ ನಡೆದ ಚರ್ಚೆಯಲ್ಲಿ ಪಾಲ್ಗೊಂಡ ಅವರು, ದೇಶದಲ್ಲಿರುವ ವಕ್ಫ್ ಬೋರ್ಡ್‌ ಗಳ ಆಸ್ತಿ ಸುಮಾರು ₹1.2 ಲಕ್ಷ ಕೋಟಿ ಬೆಲೆ ಬಾಳುತ್ತದೆ. ಇಂತಹ ಬೆಲೆ ಬಾಳುವ ಆಸ್ತಿಯನ್ನು ದಾನಿಗಳು ನೀಡಿದ್ದಾರೆ. ಈ ಆಸ್ತಿಯನ್ನು ರಕ್ಷಣೆ ಮಾಡಿ ಬಡ ಮುಸ್ಲಿಮರಿಗೆ ಅನುಕೂಲ ಆಗುವ ಕೆಲಸವನ್ನು ಈ ವಿಧೇಯಕ ಮಾಡುತ್ತಿದೆ ಎಂದರು.

ಈ ಮಸೂದೆಯು ವಕ್ಫ್ ಮಂಡಳಿಗಳ ಅಡಿಯಲ್ಲಿರುವ ಆಸ್ತಿಗಳ ಆಡಳಿತವನ್ನು ನಿಯಂತ್ರಿಸುತ್ತದೆ. ಇದು ಪ್ರಸ್ತುತ ಭಾರತದಾದ್ಯಂತ 9.4 ಲಕ್ಷ ಎಕರೆಗಳಷ್ಟು ಇರುವ ಒಟ್ಟು 8.7 ಲಕ್ಷ ಆಸ್ತಿಗಳನ್ನು ನಿಯಂತ್ರಿಸುತ್ತದೆ ಹಾಗೂ ಅದರ ಮೌಲ್ಯ ₹1.2 ಲಕ್ಷ ಕೋಟಿ. ಆದರೆ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಈ ಆಸ್ತಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು.

ನಾವು ಜಾತ್ಯತೀತ ಎಂದು ಹೇಳಿಕೊಂಡವರು ಮುಸ್ಲಿಮರಿಗೆ ಕಳೆದ ಎಪ್ಪತ್ತೈದು ವರ್ಷಗಳಿಂದ ಅನ್ಯಾಯ ಮಾಡುತ್ತಲೇ ಇದ್ದಾರೆ ಎಂದು ಕಿಡಿಕಾರಿದ ಅವರು; ವಕ್ಫ್ ಆಸ್ತಿ ದುರ್ಬಳಕೆ ಆಗದಂತೆ ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ದೇವೇಗೌಡರು ಮುಕ್ತಕಂಠದಿಂದ ಶ್ಲಾಘಿಸಿದರು.

ಈ ವಿಧೇಯಕವೂ ಆರ್ಥಿಕ ಮತ್ತು ಸಾಜಿಕವಾಗಿ ದುರ್ಬಲವಾಗಿರುವ ಮುಸ್ಲಿಮರನ್ನು ಮೇಲೆತ್ತುತ್ತದೆ. ಆದರೆ, ಎಲ್ಲಿಯೂ ಅವರ ಧಾರ್ಮಿಕ ನಂಬಿಕೆಗಳಲ್ಲಿ ಮೂಗು ತೂರಿಸುವುದಿಲ್ಲ. ಇದನ್ನು ಈ ವಿಧೇಯಕದ ಟೀಕಾಕಾರರು ಅರ್ಥ ಮಾಡಿಕೊಳ್ಳಬೇಕು. ಈ ಮಸೂದೆ ಕೇವಲಕಂದಾಯ ಮತ್ತು ಆಡಳಿತ ವಿಷಯಗಳಲ್ಲಿ ಕಟ್ಟುನಿಟ್ಟಾಗಿ ವ್ಯವಹರಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ನಮ್ಮ ದೇಶದಲ್ಲಿನ ನಾಗರಿಕರು ದೇವರನ್ನು ನಾನಾ ಹೆಸರುಗಳಲ್ಲಿ, ಬಗೆಯಲ್ಲಿ ಪೂಜಿಸುತ್ತಾರೆ, ಕರೆಯುತ್ತಾರೆ. ಕೆಲವರು ಅಲ್ಹಾ ಎನ್ನುತ್ತಾರೆ, ನಾನು ರಾಮ ಎಂದು ಕರೆಯುತ್ತೇನೆ. ನಾನು ದೇವರಲ್ಲಿ ನಂಬಿಕೆ ಇಟ್ಟಿದ್ದೇನೆ. ಎಲ್ಲಾ ದೇವರುಗಳ ಬಗ್ಗೆ ಗೌರವ, ನಂಬಿಕೆ ಹೊಂದಿದ್ದೇನೆ. ನಾನು ತಿರುಪತಿ, ಅಮೃತಸರದ ಸ್ವರ್ಣ ಮಂದಿರ, ಅಜ್ಮೀರ್ ದರ್ಗಾಕ್ಕೂ ಹೋಗುತ್ತೇನೆ. ನನ್ನ ನಂಬಿಕೆ ನನ್ನದು. ಇತರರ ನಂಬಿಕೆಯನ್ನು ಗೌರವಿಸುತ್ತೇನೆ. ತುಳಿತಕ್ಕೆ ಒಳಗಾದ ದುರ್ಬಲರ ಪರವಾಗಿ ನಾನು ವಕ್ಫ್ ಮಸೂದೆ ಮತ್ತು ಮೋದಿ ಅವರ ಸರ್ಕಾರವನ್ನು ಬೆಂಬಲಿಸುತ್ತೇನೆ ಎಂದು ಮಾಜಿ ಪ್ರಧಾನಿ ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಕರ್ನಾಟಕದಲ್ಲಿ ನಾನು ಮುಖ್ಯಮಂತ್ರಿ ಆಗಿ ಅಲ್ಪಸಂಖ್ಯಾತರ ರಕ್ಷಣೆಗೆ ಸಾಕಷ್ಟು ನಿರ್ಧಾರಗಳನ್ನು ಮಾಡಿದ್ದೇನೆ. ಅವರ ಒಳ್ಳೆಯದಕ್ಕಾಗಿ ಅನೇಕ ಕ್ರಮಗಳನ್ನು ಕೈಗೊಂಡಿದ್ದೇನೆ. ಹಾಗಂತ ನಾನು ಯಾವುದೇ ಸಿದ್ಧಾಂತಕ್ಕೆ ಜೋತು ಬಿದ್ದಿಲ್ಲ. ನಾನೊಬ್ಬ ರೈತ. ರೈತರಿಗೂ ಒಳ್ಳೆಯದು ಮಾಡಿದ್ದೇನೆ. ಅಲ್ಲದೆ, ನಾನು ಯಾವುದೇ ಸಿದ್ಧಾಂತದವನಲ್ಲ, ನಾನು ರೈತ. ಮುಸ್ಲಿಂ ಮಾತ್ರವಲ್ಲ ಬಹಳಷ್ಟು ಸಮುದಾಯಕ್ಕೆ ಮೀಸಲಾತಿ ನೀಡಿದ್ದೇನೆ. ಸಣ್ಣಪುಟ್ಟ ಸಮುದಾಯಗಳಿಗೆ ಮೀಸಲು ಸೌಲಭ್ಯ ನೀಡಿ ಅವರ ಅಭಿವೃದ್ಧಿಗೆ ಕೆಲಸ ಮಾಡಿದ್ದೇನೆ. ಅನೇಕ ಹೋರಾಟ, ಸಂಘರ್ಷಗಳನ್ನು ಮಾಡಿದ್ದೇನೆ. ಆದರೆ, ಯಾವತ್ತೂ ನಾನು ಸಭಾಧ್ಯಕ್ಷರ ಪೀಠಕ್ಕೆ ಅಪಮಾನ ಮಾಡಿಲ್ಲ. ಮಾಡುವುದೂ ಇಲ್ಲ. ಆದರೆ, ಇಲ್ಲಿ ನಡೆಯುತ್ತಿರುವುದು ನೋಡಿ ಬೇಸರ ಆಗುತ್ತದೆ ಎಂದು ದೇವೇಗೌಡರು ಅತೃಪ್ತಿ ವ್ಯಕ್ತಪಡಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8412 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment