Tuesday, 10 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ಮನರಂಜನೆ

ಆಗಸ್ಟ್ 8ರಿಂದ ಜೀ ಕನ್ನಡದಲ್ಲಿ ‘ಹಳ್ಳಿ ಪವರ್ ರಿಲೋಡೆಡ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 24 ವೀಕ್ಷಣೆಗಳು
halli power

ಬೆಂಗಳೂರು: ಜೀ ಕನ್ನಡ ತನ್ನ ಪ್ರೇಕ್ಷಕರಿಗಾಗಿ ‘ಹಳ್ಳಿ ಪವರ್ ರಿಲೋಡೆಡ್’ ಎಂಬ ವಿನೂತನ ರಿಯಾಲಿಟಿ ಶೋವನ್ನು ಪರಿಚಯಿಸಲು ಸಜ್ಜಾಗಿದೆ. ಗ್ರಾಮೀಣ ಕರ್ನಾಟಕದ ಸಂಸ್ಕೃತಿ, ಬದುಕಿನ ಸೊಗಡು ಮತ್ತು ಸವಾಲುಗಳನ್ನು ಪರಿಚಯಿಸುವ ಈ ಕಾರ್ಯಕ್ರಮವು ಆತ್ಮವಿಶ್ವಾಸ, ಒಗ್ಗಟ್ಟು ಹಾಗೂ ಜೀವನದ ಹೊಸ ಅನುಭವಗಳನ್ನು ಅನಾವರಣಗೊಳಿಸಲಿದೆ. ಆಗಸ್ಟ್ 8ರಿಂದ ಈ ಕಾರ್ಯಕ್ರಮವು ಶನಿವಾರ ಮತ್ತು ಭಾನುವಾರ ರಾತ್ರಿ 9:00 ಗಂಟೆಗೆ ಹಾಗೂ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30 ಗಂಟೆಗೆ ಪ್ರಸಾರವಾಗಲಿದೆ.

ಈ ಸ್ಪರ್ಧಿಗಳಿಗೆ ಟೆಲಿವಿಷನ್, ಮೊಬೈಲ್, ಇಂಟರ್ನೆಟ್ ಸೇರಿದಂತೆ ಯಾವುದೇ ಐಷಾರಾಮಿ ಸೌಲಭ್ಯಗಳು ಸಿಗುವುದಿಲ್ಲ ಮತ್ತು ಹಳ್ಳಿಯ ಸರಳ ಜೀವನಕ್ಕೆ ಒಗ್ಗಬೇಕು ಹಾಗು ಕುಟುಂಬದವರಿಂದ ದೂರವಿರಬೇಕು. ಕೃಷಿ ಕೆಲಸ, ಜಾನುವಾರುಗಳ ಆರೈಕೆ, ಅಡುಗೆ, ಮನೆಯ ಜವಾಬ್ದಾರಿಗಳು, ಹಳ್ಳಿಯ ದಿನನಿತ್ಯದ ಕಠಿಣ ಕೆಲಸಗಳು… ಹೀಗೆ ಪ್ರತಿಯೊಂದು ಸವಾಲೂ ಸ್ಪರ್ಧಿಗಳ ದೈಹಿಕ ಸಾಮರ್ಥ್ಯ ಹಾಗು ಮಾನಸಿಕ ಸ್ತಿಮಿತತೆಯನ್ನು ಪರೀಕ್ಷಿಸಲಿದೆ.

ಎಲ್ಲರ ಅಚ್ಚುಮೆಚ್ಚಿನ ಕರ್ನಾಟಕದ ಹೆಸರಾಂತ ನಿರೂಪಕ ಅಕುಲ್ ಬಾಲಾಜಿ ಅವರು ಹಳ್ಳಿ ಪವರ್ ಶೋ ನ ನಿರೂಪಣಾ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಸ್ನೇಹ ಹೆಚ್, ಬಿಬಿ ಹಾಜಿರಾ, ಏಂಜೆಲೀನ್, ರಿಗ್ಮ್ಯಾ ರಾಜಶ್ರೀ, ದರ್ಶಿನಿ ಗೌಡ, ಪೂಜಾ ಚಂದ್ರಶೇಖರ್, ಅನಿಷಾ ಲಕ್ಷ್ಮಣ್, ಸುಷ್ಮಾ ತೊಗರೆ, ತೇಜಸ್ವಿನಿ, ಅಂಕಿತ ದೇವ್, ಪೂರ್ವಿಕ ಆರ್ ಕೆ, ಚಿತ್ರಶ್ರೀ, ಪೂರ್ವ ವೈ, ರಚನಾ, ನಿಖಿತಾ ಸ್ವಾಮಿ, ನಿವೇದಿತಾ ರೈ ಹೀಗೆ ಸಿಟಿ ಯಲ್ಲಿ ಬೆಳೆದ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಹೊಸ ಬದುಕಿಗೆ ಹೊಂದಿಕೊಳ್ಳುವ ಪ್ರಯತ್ನದಲ್ಲಿ, ಸ್ಪರ್ಧಿಗಳ ನಡುವಿನ ಸ್ನೇಹ, ಎದುರಾಗುವ ಸವಾಲುಗಳು, ಗೆಲುವು-ಸೋಲು, ಆತ್ಮವಿಶ್ವಾಸ ಹಾಗೂ ಅವರ ಜೀವನದಲ್ಲಿ ಆಗುವ ಬದಲಾವಣೆಗಳನ್ನು ಪ್ರೇಕ್ಷಕರು ಕಣ್ತುಂಬಿಕೊಳ್ಳಲಿದ್ದಾರೆ. ‘ಹಳ್ಳಿ ಪವರ್’ ಪಟ್ಟವನ್ನು ತಮ್ಮದಾಗಿಸಿಕೊಳ್ಳುವ ಗುರಿಯೊಂದಿಗೆ ಪ್ರತಿಯೊಬ್ಬ ಸ್ಪರ್ಧಿಯೂ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಲಿದ್ದು, ಅವರ ಈ ರೋಚಕ ಪಯಣ ಮನರಂಜನೆಯ ಜೊತೆಗೆ ಪ್ರೇಕ್ಷಕರಿಗೆ ಸ್ಫೂರ್ತಿಯನ್ನೂ ಸಹ ನೀಡಲಿದೆ.

ಆಗಸ್ಟ್ 8ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9:00 ಗಂಟೆಗೆ ಹಾಗೂ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಆಗೋ ‘ಹಳ್ಳಿ ಪವರ್ ರಿಲೋಡೆಡ್ ‘ ಕಾರ್ಯಕ್ರಮವನ್ನು ತಪ್ಪದೇ ವೀಕ್ಷಿಸಿ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment