ಇಸ್ರೇಲ್ ಉತ್ತರ ಗಾಜಾದ ಸ್ಟ್ರಿಪ್ ನಗರದ ಮೇಲೆ ಭಾರೀ ಪ್ರಮಾಣದ ಕ್ಷಿಪಣಿ ದಾಳಿ ನಡೆಸಿದ್ದರಿಂದ ಹಮಾಸ್ ಕಮಾಂಡರ್ ಸೇರಿದಂತೆ 35 ಪ್ಯಾಲೆಸ್ತಿಯರು ಮೃತಪಟ್ಟಿದ್ದಾರೆ.
ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಹಮಾಸ್ ಸೇನೆ ದಾಳಿ ನಡೆಸಿದ ನಂತರ ಇಸ್ರೇಲ್ ಪ್ರತಿ ದಾಳಿ ನಡೆಸುತ್ತಿದ್ದು, ದಾಳಿಯಿಂದ ತಪ್ಪಿಸಿಕೊಳ್ಳಲು ಪ್ಯಾಲೆಸ್ತಿನಿಯರು ಉತ್ತರ ಗಾಜಾದಲ್ಲಿ ಸುರಕ್ಷಿತ ಪ್ರದೇಶಕ್ಕೆ ತೆರಳಿದ್ದರು. ಆದರೆ ಇಸ್ರೇಲ್ ಈ ನೆಲೆಗಳನ್ನು ಗುರುತಿಸಿ ದಾಳಿ ಆರಂಭಿಸಿದೆ.
ಇಸ್ರೇಲ್ ಭಾನುವಾರ ನಡೆಸಿದ ಕ್ಷಿಪಣಿ ದಾಳಿಯಲ್ಲಿ ನೂರಾರು ಕಟ್ಟಡಗಳು ಧ್ವಂಸಗೊಂಡಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಗಾಜಾ ಸೇನಾಧಿಕಾರಿಗಳು ತಿಳಿಸಿದ್ದಾರೆ.