ಅತ್ಯಾಚಾರ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ ಅವರನ್ನು ನ್ಯಾಯಾಲಯ ಎಸ್ ಐಟಿ ಕಸ್ಟಡಿಗೆ ವಹಿಸಿದೆ.
17ನೇ ಎಸಿಎಂಎಂ ನ್ಯಾಯಾಧೀಶ ರವೀಂದ್ರ ಕುಮಾರ್ ಬಿ. ಕಟ್ಟಿಮನಿ ಅವರ ಕೋರಮಂಗಲ ನಿವಾಸದಲ್ಲಿ ಎಚ್.ಡಿ. ರೇವಣ್ಣ ಅವರನ್ನು ಎಸ್ ಐಟಿ ಹಾಜರುಪಡಿಸಿದ್ದರು.
ನ್ಯಾಯಾಧೀಶರ ಮುಂದೆ ರಾಜಕೀಯ ಷಡ್ಯಂತ್ರದಿಂದ ನನ್ನನ್ನು ಬಂಧಿಸಲಾಗಿದೆ ಎಂದು ರೇವಣ್ಣ ಕಣ್ಣೀರು ಹಾಕಿದರು. ವಿಚಾರಣೆ ವೇಳೆ ಎಚ್.ಡಿ. ರೇವಣ್ಣ ಪ್ರತಿಕ್ರಿಯಿಸುತ್ತಿಲ್ಲ. ಆದ್ದರಿಂದ 5 ದಿನ ವಿಚಾರಣೆಗೆ ನೀಡುವಂತೆ ಎಸ್ ಐಟಿ ಅಧಿಕಾರಿಗಳು ಮನವಿ ಮಾಡಿದ್ದರು.