Thursday, May 14, 2026
Google search engine
Homeಬೆಂಗಳೂರುಮೇ 22ರವರೆಗೆ ಭಾರೀ ಮಳೆ: ಬೆಂಗಳೂರು ಸೇರಿ 22 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಮೇ 22ರವರೆಗೆ ಭಾರೀ ಮಳೆ: ಬೆಂಗಳೂರು ಸೇರಿ 22 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಪೂರ್ವ ಮುಂಗಾರು ಮಳೆಯ ಅಬ್ಬರ ಇನ್ನೂ ಒಂದು ವಾರ ಕಾಲ ಮುಂದುವರಿಯಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಸಂಜೆಯಿಂದ ಭಾರೀ ಮಳೆಯಾಗಿದ್ದು, ಬಹುತೇಕ ತಗ್ಗು ಪ್ರದೇಶದ ಬಡಾವಣೆಗಳು ಜಲಾವೃತಗೊಂಡಿದ್ದು, ರಸ್ತೆಗಳು ಮುಳುಗಡೆ ಆಗಿ ವೀಕೆಂಡ್ ಪ್ರವಾಸಕ್ಕೆ ಹೊರಟ್ಟಿದ್ದ ವಾಹನ ಸವಾರರಿಗೆ ತೊಂದರೆ ಉಂಟಾಗಿದೆ.

ಹವಾಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಮೇ 22ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೇ 22ರವರೆಗೆ ಮಳೆಯಾಗಲಿದೆ.

ಮೇ ಕೊನೆಯ ವಾರದಲ್ಲಿ ಮುಂಗಾರು ಕೇರಳವನ್ನು ಪ್ರವೇಶಿಸಲಿದ್ದು, ಜೂನ್ ಮೊದಲ ವಾರದಲ್ಲಿ ರಾಜ್ಯವನ್ನು ಪ್ರವೇಶಿಸಲಿದೆ. ಆದರೆ ಅದಕ್ಕೂ ಮುನ್ನವೇ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments