Saturday, May 16, 2026
Google search engine
Homeರಾಜಕೀಯಹೆಬ್ಬಾರ್, ಸೋಮಶೇಖರ್ ಉಚ್ಛಾಟನೆ: ಯತ್ನಾಳ್ ನಂತರ ಬಿಜೆಪಿಯ ಮತ್ತೆರಡು ವಿಕೆಟ್ ಪತನ!

ಹೆಬ್ಬಾರ್, ಸೋಮಶೇಖರ್ ಉಚ್ಛಾಟನೆ: ಯತ್ನಾಳ್ ನಂತರ ಬಿಜೆಪಿಯ ಮತ್ತೆರಡು ವಿಕೆಟ್ ಪತನ!

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಕ್ಕಾಗಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆ.

ಕಳೆದ ಕೆಲವು ತಿಂಗಳಿಂದ ಬಿಜೆಪಿಯಲ್ಲಿ ನಡೆಯುತ್ತಿರುವ ಭಿನ್ನಮತದ ಕುರಿತು ಬಿಜೆಪಿ ಶಿಸ್ತುಸಮಿತಿ ಸಾಕಷ್ಟು ಕಾದ ನಂತರ ಇದೀಗ ಭಿನ್ನಮತಿಯರ ವಿರುದ್ಧ ಕ್ರಮ ಕೈಗೊಳ್ಳಲು ಆರಂಭಿಸಿದ್ದು, ಬಸನಗೌಡ ಪಾಟೀಲ್ ಯತ್ನಾಳ್ ನಂತರ ಇದೀಗ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ.

ಕಳೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಮತ ಚಲಾವಣೆ ಹಾಗೂ ಕಾಂಗ್ರೆಸ್ ಪಕ್ಷದ ಸಭೆ-ಸಮಾರಂಭಗಳಲ್ಲಿ ಪಾಲ್ಗೊಂಡಿದ್ದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಉಚ್ಚಾಟಿಸಲಾಗಿದೆ. ಇದರಿಂದ ಬಿಜೆಪಿಯಲ್ಲಿ ಉಚ್ಛಾಟಿತರ ಸಂಖ್ಯೆ 3ಕ್ಕೇರಿದೆ.

ಬಿಜೆಪಿ ಶಾಸಕರಾಗಿದ್ದರೂ ಕಾಂಗ್ರೆಸ್ ಪರ ಧೋರಣೆ ತಳೆದಿದ್ದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಉಚ್ಛಾಟಿಸಿ ಬಿಜೆಪಿ ಶಿಸ್ತು ಸಮಿತಿ ಆದೇಶ ಹೊರಡಿಸಿದೆ.

ಕೆಲವು ತಿಂಗಳ ಹಿಂದೆ ಬಿಜೆಪಿ ಶಿಸ್ತು ಸಮಿತಿ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಆರೋಪಗಳ ಬಗ್ಗೆ ಸ್ಪಷ್ಟನೆ ಕೇಳಿ ನೋಟಿಸ್ ಜಾರಿ ಮಾಡಿತ್ತು. ಇದೀಗ ಇಬ್ಬರನ್ನು ಉಚ್ಚಾಟಿಸಿದೆ.

ಪಕ್ಷದಿಂದ ಉಚ್ಚಾಟನೆಗೆ ಪ್ರತಿಕ್ರಿಯಿಸಿದ ಶಿವರಾಮ್ ಹೆಬ್ಬಾರ್, ಪಕ್ಷದ ತೀರ್ಮಾನವನ್ನು ಸ್ವಾಗತಿಸುವುದಾಗಿ ತಿಳಿಸಿದ್ದಾರೆ.

ಪಕ್ಷದ ಸಭೆಗಳಿಗೆ ನಮ್ಮನ್ನು ಕರೆಯುತ್ತಿರಲಿಲ್ಲ. ಪಕ್ಷದಲ್ಲಿ ನಮೆಗೆ ಯಾವುದೇ ಜವಾಬ್ದಾರಿ ನೀಡಿರಲಿಲ್ಲ. ಕೊಟ್ಟ ಜವಾಬ್ದಾರಿಗಳನ್ನು ಹಿಂದೆ ನಿಭಾಯಿಸಿದ್ದೇವೆ. ಈ ಬಗ್ಗೆ ಶೀಘ್ರದಲ್ಲೇ ಸುದ್ದಿಗೋಷ್ಠಿಯಲ್ಲಿ ಮುಂದಿನ ನಿರ್ಧಾರವನ್ನು ತಿಳಿಸುವುದಾಗಿ ಅವರು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments