Sunday, 8 November 2026 — Kannadavahini
BREAKING NEWS
ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ
ದೇಶ

ಲ್ಯಾಡಿಂಗ್‌ ವೇಳೆ ಕುಸಿದ ಹೆಲಿಪ್ಯಾಡ್:‌ ಇರುಮುಡಿ ಕಟ್ಟು ಹೊತ್ತ ರಾಷ್ಟ್ರಪತಿ ದ್ರೌಪದಿ ಮರ್ಮು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 12 ವೀಕ್ಷಣೆಗಳು
kerala news

ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಹೆಲಿಪ್ಯಾಡ್‌ ನಲ್ಲಿ ಸಿಲುಕಿದ್ದರಿಂದ ಸೇನಾ ಸಿಬ್ಬಂದಿ ಪರದಾಡಿದ ಘಟನೆ ಕೇರಳದ ಪ್ರಮದಂ ಕ್ರೀಡಾಂಗಣದಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.

ಶಬರಿಮಲೆಯ ತಪ್ಪಲಿನಲ್ಲಿರುವ ಪಂಪಾದಲ್ಲಿ ರಾಷ್ಟ್ರಪತಿ ಅವರಿದ್ದ ಹೆಲಿಕಾಪ್ಟರ್‌ನ ಒಂದು ಭಾಗ ಡಾಂಬರಿನಲ್ಲಿ ಸಿಲುಕಿಕೊಂಡಿತ್ತು. ರಾಷ್ಟ್ರಪತಿನ ದ್ರೌಪದಿ ಮುರ್ಮುಸುರಕ್ಷಿತವಾಗಿ ಕೆಳಗಿಳಿಸಲು ಸೇನಾ ಸಿಬ್ಬಂದಿ ಕೆಲ ಸಮಯ ಪರದಾಡಿದರು.

ರಾಜೀವ್ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಹಲವಾರು ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಒಳಗೊಂಡಂತೆ ಭಾರತೀಯ ವಾಯುಪಡೆ ಸಿಬ್ಬಂದಿ ಎಂಐ -17 ಹೆಲಿಕಾಪ್ಟರ್‌ ಚಕ್ರಗಳನ್ನು ಡಾಂಬರಿನಿಂದ ಮೇಲಕ್ಕೆ ತಳ್ಳಿ ಸರಿಯಾಗಿ ನಿಲ್ಲಿಸಿದರು.

ಮೊದಲು ಪಂಬಾ ಬಳಿಯ ನೀಲಕ್ಕಲ್‌ನಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್‌ ಬಗ್ಗೆ ಯೋಜನೆ ರೂಪಿಸಲಾಗಿತ್ತು. ಆದರೆ. ಅಲ್ಲಿನ ಕೆಟ್ಟ ಹವಾಮಾನದ ಕಾರಣದಿಂದಾಗಿ ಸ್ಥಳವನ್ನು ಪ್ರಮದಂಗೆ ಬದಲಾಯಿಸಲಾಯಿತು. ಕೊನೆಯ ಕ್ಷಣದಲ್ಲಿ ಇಳಿಯುವ ಸ್ಥಳವನ್ನು ನಿಗದಿಪಡಿಸಿದ್ದರಿಂದ ಸಮಸ್ಯೆಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ʻಪ್ರಮದಂನಲ್ಲಿ ಕಾಂಕ್ರೀಟ್ ಸಂಪೂರ್ಣವಾಗಿ ಗಟ್ಟಿಯಾಗಿರಲಿಲ್ಲ, ಆದ್ದರಿಂದ ಹೆಲಿಕಾಪ್ಟರ್ ಇಳಿದಾಗ ಅದರ ಕಾಂಕ್ರಿಟ್‌ಗೆ ತೂಕವನ್ನು ತಡೆದುಕೊಳ್ಳಲು ಸಾಧ್ಯವಾಗಲಿಲ್ಲ. ಚಕ್ರಗಳು ನೆಲಕ್ಕೆ ಸಿಲುಕಿತು. ಸ್ಥಳದಲ್ಲಿ ರಸ್ತೆಗುಂಡಿ ಉಂಟಾಗಲು ಕಾರಣವಾಯಿತುʼ ಎಂದು ಅಧಿಕಾರಿಯೊಬ್ಬರು ವಿವರಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳಕ್ಕೆ ನಾಲ್ಕು ದಿನಗಳ ಅಧಿಕೃತ ಭೇಟಿಗಾಗಿ ಮಂಗಳವಾರ ಸಂಜೆ ತಿರುವನಂತಪುರಕ್ಕೆ ಆಗಮಿಸಿದ್ದು, ಬುಧವಾರ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಭೇಟಿ ನೀಡಿದ್ದೂ ಅಲ್ಲದೇ ಇರುಮುಡಿ ಕಟ್ಟಿ ಪ್ರಾರ್ಥನೆ ಸಲ್ಲಿಸಿದರು.

ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಪ್ರಾರ್ಥನೆ ಸಲ್ಲಿಸಲು ಭೇಟಿ ನೀಡಿದ ಮೊದಲ ಮಹಿಳಾ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ದ್ರೌಪದಿ ಮುರ್ಮು ಪಾತ್ರರಾಗಲಿದ್ದಾರೆ. 1970ರ ದಶಕದಲ್ಲಿ ಶಬರಿಮಲೆಗೆ ಭೇಟಿ ನೀಡಿದ್ದ ಮಾಜಿ ರಾಷ್ಟ್ರಪತಿ ವಿವಿ. ಗಿರಿ ಅವರ ನಂತರ, ಈ ದೇಗುಲಕ್ಕೆ ಭೇಟಿ ನೀಡುತ್ತಿರುವ ಎರಡನೇ ರಾಷ್ಟ್ರಪತಿ ಅವರಾಗಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8407 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment