ಬೆಂಗಳೂರು: ನಿರೀಕ್ಷೆಯಂತೆ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು.
ಲೋಕಭವನದಲ್ಲಿ ಬುಧವಾರ ನಡೆದ ಸರಳ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗಿ ಹಾಗೂ ಜಿ.ಪರಮೇಶ್ವರ್ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರೆ, ಉಳಿದ 12 ಮಂದಿ ಶಾಸಕರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸಚಿವರ ಪ್ರಮಾಣ ವಚನ ಸ್ವೀಕಾರ ವಿವರ
ನಾನು ಡಿಕೆ ಶಿವಕುಮಾರ್ ಹೆಸರಿನವನಾದ ನಾನು ಎಂದು ಡಿಕೆ ಶಿವಕುಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಅಜ್ಜಯ್ಯ ಹಾಗೂ ಅಜ್ಜ ಗಂಗಾಧರ್ ಅವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಶ್ರದ್ಧಾಪೂರ್ವಕ ಪ್ರಮಾಣ ವಚನ
ಸಚಿವರಾಗಿ ಪ್ರಿಯಾಂಕ್ ಖರ್ಗೆ ಪ್ರಮಾಣವಚನ ಸ್ವೀಕಾರ
ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಶಾಸಕರಾದ ಪ್ರಿಯಾಂಕ್ “ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇನೆ” ಎಂದು ಪ್ರಮಾಣವಚನ ಸ್ವೀಕರಿಸಿದರು.
ಕೆಹೆಚ್ ಮುನಿಯಪ್ಪ
ಲೋಕಭವನದ ಗಾಜಿನಮನೆಯಲ್ಲಿ ಸಂಪುಟ ದರ್ಜೆ ಸಚಿವರಾಗಿ ಕೆ.ಹೆಚ್.ಮುನಿಯಪ್ಪ ಪ್ರಮಾಣವಚನ ಸ್ವೀಕಾರಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕ್ಷೇತ್ರದ ಶಾಸಕರಾಗಿರುವ ಕೆ.ಹೆಚ್ ಮುನಿಯಪ್ಪ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಪರಮೇಶ್ವರ್ ಪ್ರಮಾಣವಚನ
ಡಾ ಜಿ ಪರಮೇಶ್ವರ್ ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಡಾ ಬಿಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿರುವುದು ವಿಶೇಷ.
ಯತೀಂದ್ರ ಪ್ರಮಾಣವಚನ
ಡಾ. ಯತೀಂದ್ರ ಸಿದ್ದರಾಮಯ್ಯ ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ತಂದೆ ಸಿದ್ದಾರಾಮಯ್ಯ ಕಾಲು ಮುಟ್ಟಿ ನಮಸ್ಕರಿಸಿದರು. ಆಗ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರ ಭುಜ ಮುಟ್ಟಿ ಆಶೀರ್ವದಿಸಿದರು.
ಖಂಡ್ರೆ ಪ್ರಮಾಣ
ಈಶ್ವರ್ ಖಂಡ್ರೆ ಚನ್ನಬಸವ ಪಟ್ಟ ದೇವರ ಹೆಸರಿನಲ್ಲಿ ಮಂತ್ರಿಗಿರಿ ಪಡೆದರೆ, ಭೈರತಿ ಸುರೇಶ್ ಮತ್ತು ಶರಣಪ್ರಕಾಶ್ ಪಾಟೀಲ್ ದೇವರ ಹೆಸರಿನಲ್ಲಿ ಸಚಿವ ಸ್ಥಾನದ ಗದ್ದುಗೆಗೆ ಏರಿದರು.
ಸತೀಶ್ ಜಾರಕಿಹೊಳಿ
ಸಂಪುಟ ದರ್ಜೆ ಸಚಿವರಾಗಿ ಸತೀಶ್ ಜಾರಕಿಹೊಳಿ ಮನೆದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಕೃಷ್ಣ ಬೈರೇಗೌಡ
ಸಂಪುಟ ದರ್ಜೆ ಸಚಿವರಾಗಿ ಕೃಷ್ಣ ಬೈರೇಗೌಡ ಶ್ರದ್ಧಾಪೂರ್ವಕವಾಗಿ ಕಾರ್ಯ ನಿರ್ವಹಿಸುವುದುದಾಗಿ ಪ್ರಮಾಣವಚನ ಸ್ವೀಕರಿಸಿದರು.
ಎಂಬಿ ಪಾಟೀಲ್
ಸಂಪುಟ ದರ್ಜೆ ಸಚಿವ ಸ್ಥಾನ ಪಡೆದ ಎಂಬಿ ಪಾಟೀಲ್ ವಿಶ್ವಗುರು ಬಸವಣ್ಣ, ಬಸವಾದಿಗಳು ಹಾಗೂ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.



