ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿದ ಬೆನ್ನಲ್ಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೈಅಲರ್ಟ್ ಘೋಷಿಸಿವೆ.
ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿದ್ದರಿಂದ 70 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದರ ಬೆನ್ನಲ್ಲೇ ಉಗ್ರರು ಹಾಗೂ ಪಾಕಿಸ್ತಾನ ಸೇನೆ ಯಾವುದೇ ಹಂತದಲ್ಲಿ ದಾಳಿ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ದೇಶಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ.
ಪಾಕಿಸ್ತಾನ ಗಡಿಯಲ್ಲಿ ರಾಜ್ಯಗಳು ಸೇರಿದಂತೆ 18 ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ. ಅಲ್ಲದೇ ಸುಮಾರು 200 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಇಂಡಿಗೊ ಸಂಸ್ಥೆಯ 165 ವಿಮಾನಗಳು ಸಂಚಾರ ನಿಲ್ಲಿಸಿವೆ.
ಜಮ್ಮು, ಪೆಹಲ್ಕೋಟ್, ಜೋಧಪುರ್, ಶಿಮ್ಲಾ, ಧರ್ಮಶಾಲಾ, ಜಾಮ್ ನಗರ, ಶ್ರೀನಗರ ಸೇರಿದಂತೆ 18 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ.
ಕರಾವಳಿಯಲ್ಲಿ ಕಟ್ಟೇಚ್ಚರ ವಹಿಸಲು ಸೂಚಿಸಲಾಗಿದ್ದು, ಕಾರವಾರದ ಕದಂಬ ವಾಯುನೆಲೆಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಅಲ್ಲದೇ ಈಗಾಗಲೇ ಮೀನುಗಾರಿಕೆಗೆ ತೆರಳಿರುವವರು 12 ನಾಟಿಕಲ್ ಕಿ.ಮೀ.ಗಿಂತ ದೂರ ಹೋಗದಂತೆ ಸೂಚನೆ ನೀಡಲಾಗಿದೆ.
ಪಂಜಾಬ್ ಪ್ರಾಂತ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ಕೇಂದ್ರ ಗೃಹ ಸಚಿವ ಗಡಿ ರಾಜ್ಯಗಳಾದ ಜಮ್ಮು ಕಾಶ್ಮೀರ, ರಾಜಸ್ಥಾನ, ಪಂಜಾಬ್ ಸೇರಿದಂತೆ 18 ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ.
ಇದೇ ವೇಳೆ ಕರ್ನಾಟಕದ ಜಲಾಶಯಗಳು, ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಬಿಗಿ ಭದ್ರತೆ ಹೆಚ್ಚಿಸಿಸಲಾಗಿದೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸವನ್ನು ಮುಂದೂಡಿದ್ದೂ ಅಲ್ಲದೇ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಭೇಟಿ ಮಾಡಿ ದಾಳಿಯ ಮಾಹಿತಿ ನೀಡಿದರು.



