Thursday, November 21, 2024
Google search engine
Homeತಾಜಾ ಸುದ್ದಿಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್: ಬಂಧಿಸದಂತೆ ಹೈಕೋರ್ಟ್ ಆದೇಶ

ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್: ಬಂಧಿಸದಂತೆ ಹೈಕೋರ್ಟ್ ಆದೇಶ

ಫೋಕ್ಸೊ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ಬಂಧಿಸದಂತೆ ಪೊಲೀಸರಿಗೆ ಸೂಚನೆ ನೀಡಿದೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದರಿಂದ ದಾಖಲಾಗಿದ್ದ ಫೋಕ್ಸೊ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸೋಮವಾರ ವಿಚಾರಣೆಗೆ ಹಾಜರಾಗಲು ಸಮ್ಮತಿಸಿದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಸೂಚನೆ ನೀಡಿತು.

ಫೋಕ್ಸೊ ಕಾಯ್ದೆಯಡಿ ಯಡಿಯೂರಪ್ಪ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಬಂಧನ ಭೀತಿಯಲ್ಲಿದ್ದರು. ಆದರೆ ವಿಚಾರಣೆಗೆ ಹಾಜರಾಗಲು ಸಮ್ಮತಿಸಿದ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ಪಾರಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments