Wednesday, June 24, 2026
Google search engine
Homeಕಾನೂನುಬಿಎಸ್ ವೈ ವಿರುದ್ಧದ ಪೋಕ್ಸೋ‌ ಪ್ರಕರಣ ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬಿಎಸ್ ವೈ ವಿರುದ್ಧದ ಪೋಕ್ಸೋ‌ ಪ್ರಕರಣ ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.

ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡನೆ ಮಾಡಿದ್ದು,ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಐ ಅರುಣ್ ಅವರಿದ್ದ ಹೈಕೋರ್ಟ್ ಪೀಠವು ಆದೇಶವನ್ನು ಕಾಯ್ದಿರಿಸಿದೆ.

ಹೊಸದಾಗಿ ಪ್ರಕರಣವನ್ನು ಪರಿಗಣಿಸಲು ಹೈಕೋರ್ಟ್ ಸೂಚಿಸಿತ್ತು. ತನಿಖೆಯ ಎಲ್ಲಾ ಅಂಶಗಳನ್ನೂ ಪರಿಶೀಲಿಸಿ ಕಾಗ್ನಿಜೆನ್ಸ್ ಪಡೆಯಬೇಕಿತ್ತು. ಸಂತ್ರಸ್ತೆಯ ಹೇಳಿಕೆ ಬಿಟ್ಟು ಉಳಿದ ಸಾಕ್ಷ್ಯಗಳನ್ನು ಕೋರ್ಟ್ ಪರಿಗಣಿಸಿಲ್ಲ. ಯಡಿಯೂರಪ್ಪ ಮನೆಯಲ್ಲಿದ್ದ ಸಾಕ್ಷಿಗಳ ಹೇಳಿಕೆಯನ್ನು ಪರಿಗಣಿಸಿಲ್ಲ. ಆಡಿಯೋ ರೆಕಾರ್ಡಿಂಗ್ ಅನ್ನೂ ನ್ಯಾಯಾಲಯ ಪರಿಗಣಿಸಿಲ್ಲ. ಹೊಸದಾಗಿ ಕಾಗ್ನಿಜೆನ್ಸ್ ಪಡೆದಿರುವ ಆದೇಶ ಸರಿಯಿಲ್ಲವೆಂದು ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು.

ಇದು ರದ್ದುಪಡಿಸಬೇಕಾದ ಪ್ರಕರಣವೆಂದು ಮನವರಿಕೆಯಾಗಿಲ್ಲ. ಆದರೆ ಕಾಗ್ನಿಜೆನ್ಸ್ ಪಡೆದ ವಿಧಾನದ ಬಗ್ಗೆ ಪ್ರಶ್ನೆಗಳಿವೆ ಎಂದು ಹೈಕೋರ್ಟ್ ಹೇಳಿದೆ.

ಸರ್ಕಾರಿ ವಕೀಲರ ವಾದ:

ರಾಜ್ಯ ಸರ್ಕಾರದ ಪರ ಎಸ್‌ಪಿಪಿ ಪ್ರೊ.ರವಿವರ್ಮ ಕುಮಾರ್ ವಾದ ಮಂಡನೆ ಮಾಡಿ, ಕೊಠಡಿಯಲ್ಲಿ ಲಾಕ್ ಮಾಡಿಕೊಂಡಿದ್ದರಿಂದ ಸಂತ್ರಸ್ತೆ ಹೇಳಿಕೆಯೇ ಮುಖ್ಯ. ಯಡಿಯೂರಪ್ಪ ಸೂಚನೆ ಮೇರೆಗೆ ಮೊಬೈಲ್​ನಲ್ಲಿದ್ದ ವಿಡಿಯೋ ಡಿಲೀಟ್ ಮಾಡಲಾಗಿದೆ.

ಮೊಬೈಲ್ ರೆಕಾರ್ಡಿಂಗ್​ನಲ್ಲಿರುವುದು ಯಡಿಯೂರಪ್ಪ ಧ್ವನಿ ಎಂಬ ಬಗ್ಗೆ ಎಫ್​​ಎಸ್​ಎಲ್ ವರದಿಯಿದೆ. ಫಿರ್ಯಾದಿ ಮಹಿಳೆಗೆ ಬ್ಯಾಗ್​ನಲ್ಲಿ 2 ಲಕ್ಷ ರೂಪಾಯಿ ಹಣ ನೀಡಲಾಗಿದೆ. ನಡೆದ ಘಟನೆಯನ್ನು ಬಾಲಕಿಯೇ ವಿವರಿಸಿದ್ದಾಳೆಂದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಅಂತಿಮವಾಗಿ ಆದೇಶ ಕಾಯ್ದಿರಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments