ಇರಾನ್ ಬೆಂಬಲಿತ ಹಿಜ್ಜಾಬುಲ್ಲಾ ಮುಖ್ಯಸ್ಥ ಹಸನ್ ನಸ್ರರುಲ್ಲಾ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಘೋಷಿಸಿದೆ. ಹಿಜಾಬುಲ್ಲಾ ಕೂಡ ಹಸನ್ ಸಾವನ್ನು ಒಪ್ಪಿಕೊಂಡಿದೆ.
ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪೂರ್ಣ ಜಯ ಸಾಧಿಸುವವರೆಗೂ ಹೋರಾಟ ನಡೆಸಲಿದ್ದೇವೆ ಎಂದು ಘೋಷಣೆ ಮಾಡಿದ ಬೆನ್ನಲ್ಲೇ ಶುಕ್ರವಾರ ನಡೆದ ದಾಳಿಯಲ್ಲಿ ಹಸನ್ ನಸ್ರರುಲ್ಲಾ ಹತ್ಯೆಯಾಗಿದ್ದಾರೆ. ಈ ಗೆಲುವಿನೊಂದಿಗೆ ಉಗ್ರವಾದ ಅಂತ್ಯಗೊಳಿಸಿದ್ದೇವೆ ಎಂದು ಇಸ್ರೇಲ್ ಹೇಳಿಕೊಂಡಿದೆ.
ಬೈರುತ್ ಮೇಲೆ ಇಸ್ರೇಲ್ ಭಾರೀ ಪ್ರಮಾಣದಲ್ಲಿ ಕ್ಷಿಪಣಿ ದಾಳಿ ನಡೆಸಿತ್ತು. 64 ವರ್ಷದ ಹಸನ್ ಮೃತಪಟ್ಟಿರುವುದು ನಿಜ. ಆದರೆ ನಮ್ಮ ಜಿಹಾದಿ ಹೋರಾಟವನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಹಿಜಾಬುಲ್ಲಾ ಹೇಳಿಕೆಯಲ್ಲಿ ತಿಳಿಸಿದೆ.