ನವದೆಹಲಿ: ಹರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವ ಕುರಿತ ಬಿಕ್ಕಟ್ಟಿನ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುದೀರ್ಘ 40 ನಿಮಿಷ ಮಾತುಕತೆ ನಡೆಸಿದ್ದಾರೆ.
ಸೋಮವಾರ ಕರೆ ಮಾಡಿದ ಟ್ರಂಪ್ ಜೊತೆ ಮೋದಿ ಮಾತುಕತೆ ನಡೆಸಿದ್ದು, ಮಧ್ಯಪ್ರಾಚ್ಯ ಬಿಕ್ಕಟ್ಟು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ.
ಮಾತುಕತೆ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ, ಜಾಗತಿಕ ಮಟ್ಟದಲ್ಲಿ ನಮ್ಮ ಸ್ನೇಹ ಮತ್ತಷ್ಟು ಗಟ್ಟಿಯಾಗಿದ್ದು, ದ್ವೀಪಕ್ಷೀಯ ಒಪ್ಪಂದಗಳ ಕುರಿತು ಚರ್ಚೆ ನಡೆಸಲಾಯಿತು. ಈ ವೇಳೆ ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದ ಹರ್ಮುಜ್ ಜಲಸಂಧಿ ಸುರಕ್ಷಿತ ಹಾಗೂ ಮುಕ್ತಗೊಳಿಸುವ ಕುರಿತು ಚರ್ಚಿಸಲಾಯಿತು ಎಂದರು.



