Monday, November 25, 2024
Google search engine
Homeಜಿಲ್ಲಾ ಸುದ್ದಿಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಬಿಜೆಪಿ ಪಾಲು, ಕಾಂಗ್ರೆಸ್ ಗೆ ಮುಖಭಂಗ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಬಿಜೆಪಿ ಪಾಲು, ಕಾಂಗ್ರೆಸ್ ಗೆ ಮುಖಭಂಗ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನ ಬಿಜೆಪಿ ಪಾಲಾಗಿದ್ದು, ಕಾಂಗ್ರೆಸ್ ಗೆ ಮುಖಭಂಗ ಉಂಟಾಗಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 23ನೇ ಅವಧಿಗೆ ಮಹಾಪೌರರಾಗಿ ಬಿಜೆಪಿಯ 30ನೇ ವಾರ್ಡ್ ಸದಸ್ಯ ರಾಮಪ್ಪ ಬಡಿಗೇರ ಮತ್ತು ಉಪಮೇಯರ್ ಆಗಿ 69ನೇ ವಾರ್ಡ್ ಸದಸ್ಯೆಯರಾದ ದುರ್ಗಮ್ಮ ಬಿಜವಾಡ ಉಪ ಮೇರ್ ಆಗಿ ಆಯ್ಕೆಯಾಗಿದ್ದಾರೆ.

ರಾಮಪ್ಪ ಬಡಿಗೇರ 47 ಮತಗಳನ್ನು ಪಡೆದು ಮೇಯರ್ ಆಗಿ ಆಯ್ಕೆಯಾದರೆ, ಕಾಂಗ್ರೆಸ್ ನ 33ನೇ ವಾರ್ಡ್ ಸದಸ್ಯರಾದ ಇಮಾಮ್ ಹುಸೇನ ಎಲಿಗಾರ 36 ಮತ ಪಡೆದು ಸೋಲುಂಡರು. ಉಪಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ದುರ್ಗಮ್ಮ ಬಿಜವಾಡ 47 ಮತ ಪಡೆದು ಆಯ್ಕೆಯಾದರೆ, 77 ನೇ ವಾರ್ಡ್ ಸದಸ್ಯೆಯರಾದ ಹುಸೇನಬಿ ನಾಲತವಾಡ 36 ಮತ ಗಳಿಸಿ ಸೋಲುಂಡರು.

ಚುನಾವಣಾ ಅಧ್ಯಕ್ಷಾಧಿಕಾರಿಯಾಗಿದ್ದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಎಸ್.ಬಿ.ಶೆಟ್ಟೆಣ್ಣವರ ಪ್ರಕಟಿಸಿದರು. ಮಹಾಪೌರ ಮತ್ತು ಉಪ ಮಹಾಪೌರ ಚುನಾವಣೆಯಲ್ಲಿ ಸದಸ್ಯರು ಕೈ ಎತ್ತುವ ಮೂಲಕ ತಮ್ಮ ಮತ ಚಲಾಯಿಸಿದರು.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರ ಮತ್ತು ಉಪಮಹಾಪೌರ ಚುನಾವಣೆಗೆ ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಸೇರಿ ಒಟ್ಟು 90 ಜನ ಮತದಾರರು ಇದ್ದು, ಇಂದಿನ ಮಹಾಪೌರ ಮತ್ತು ಉಪಮಹಾಪೌರ ಚುನಾವಣೆಯಲ್ಲಿ 86 ಜನರು ಪಾಲ್ಗೊಂಡಿದ್ದರು. ನಾಲ್ಕು ಜನ ಸದಸ್ಯರು ಗೈರು ಹಾಜರಾಗಿದ್ದರು.

ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾದ ಎಸ್.ಎಸ್.ಬಿರಾದಾರ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಅವರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments