ಐಪಿಎಲ್ ಟಿ-20 2026ನೇ ಸಾಲಿನ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದ್ದು, ಬೆಂಗಳೂರಿನಲ್ಲಿ ಮಾರ್ಚ್ 28ರಂದು ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಆರ್ ಸಿಬಿ ಮತ್ತು ಸನ್ ರೈಸರ್ಸ್ ಹೈದರಾಬಾದ್ ಮುಖಾಮುಖಿ ಆಗಲಿವೆ.
ಮಾರ್ಚ್ 28ರಂದು 19ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭವಾಗಲಿದ್ದು, ಮಾರ್ಚ್ 11ರವರೆಗಿನ ಮೊದಲ ಹಂತದ ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ವಿವಿಧ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟವಾದ ನಂತರ ಎರಡನೇ ಹಂತದ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ನಿರ್ಧರಿಸಿದೆ.
ಆರ್ ಸಿಬಿ 5 ಪಂದ್ಯಗಳನ್ನು ತವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದ್ದು, ಉಳಿದೆರಡು ಪಂದ್ಯಗಳನ್ನು ರಾಯ್ ಪುರದ ಶಾಹಿದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರಿಯ ಕ್ರೀಡಾಂಗಣದಲ್ಲಿ ಆಡಲಿದೆ.



