ಆರಂಭಿಕರಾದ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮ ಅವರ ಗುಡುಗು-ಸಿಡಿಲಿನ ಆಟದಿಂದ ಸನ್ ರೈಸರ್ಸ್ ಹೈದರಬಾದ್ ತಂಡ 164 ರನ್ ಗಳ ಗುರಿಯನ್ನು 9.4 ಓವರ್ ಗಳಲ್ಲೇ ತಲುಪಿ 10 ವಿಕೆಟ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿದೆ.
ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 164 ರನ್ ಸಂಪಾದಿಸಿತು. ಸ್ಪರ್ಧಾತ್ಮಕ ಮೊತ್ತವನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ 9.4 ಓವರ್ ಗಳಲ್ಲಿಯೇ ವಿಕೆಟ್ ನಷ್ಟವಿಲ್ಲದೇ ಜಯಭೇರಿ ಬಾರಿಸಿತು.
ಈ ಗೆಲುವಿನೊಂದಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡ 12 ಪಂದ್ಯಗಳಲ್ಲಿ 7 ಜಯ ಹಾಗೂ 5 ಸೋಲಿನೊಂದಿಗೆ 14 ಅಂಕದೊಂದಿಗೆ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡರೆ, ಲಕ್ನೋ ಸೂಪರ್ ಜೈಂಟ್ಸ್ ತಂಡ 12 ಪಂದ್ಯಗಳಿಂದ ತಲಾ 6 ಮತ್ತು ಸೋಲಿನೊಂದಿಗೆ 12 ಅಂಕದೊಂದಿಗೆ ಪ್ಲೇಆಫ್ ರೇಸ್ ನಲ್ಲಿ ಮತ್ತಷ್ಟು ದುರ್ಗಮಗೊಳಿಸಿಕೊಂಡಿತು.
ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಟ್ರಾವಿಸ್ ಹೆಡ್ 30 ಎಸೆತಗಳಲ್ಲಿ 8 ಬೌಂಡರಿ ಮತ್ತು 8 ಸಿಕ್ಸರ್ ನೆರವಿನಿಂದ 89 ರನ್ ಚಚ್ಚಿದರೆ, ಅಭಿಷೇಕ್ ಶರ್ಮ 28 ಎಸೆತಗಳಲ್ಲಿ 8 ಬೌಂಡರಿ ಮತ್ತು 6 ಸಿಕ್ಸರ್ ಒಳಗೊಂಡ 75 ರನ್ ಸಿಡಿಸಿದರು.