Friday, 30 October 2026 — Kannadavahini
BREAKING NEWS
ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ
ರಾಜಕೀಯ

ಒಕ್ಕಲಿಗ ಸ್ವಾಮೀಜಿ ಮುಟ್ಟಿದರೆ ಸಮುದಾಯ ತಿರುಗಿ ಬೀಳಲಿದೆ: ಆರ್.ಅಶೋಕ ಎಚ್ಚರಿಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 1 ವೀಕ್ಷಣೆಗಳು
okkliga swamiji
okkliga swamiji

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರನ್ನು ಸರ್ಕಾರ ಮುಟ್ಟಲು ಬಂದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಸ್ವಾಮೀಜಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಸ್ವಾಮೀಜಿಯವರಿಗೆ ಧೈರ್ಯ ಹೇಳಿದ್ದೇವೆ ಹಾಗೂ ಒಕ್ಕಲಿಗ ಸಮಾಜದೊಂದಿಗೆ ನಾವಿದ್ದೇವೆ ಎಂದು ಹೇಳಿದ್ದೇವೆ ಎಂದರು.

ವಕ್ಫ್ ಮಂಡಳಿ ಹಿಂದೂಗಳ, ಧಾರ್ಮಿಕ ಸಂಸ್ಥೆಗಳ ಜಮೀನುಗಳನ್ನು ನುಂಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಪಹಣಿ ಬದಲಿಸಲಾಗುತ್ತಿದೆ. ಹಿಂದೂಗಳಿಗಾಗುತ್ತಿರುವ ಅನ್ಯಾಯದ ವಿರುದ್ಧ ಅವರು ಮಾತನಾಡಿದ್ದು, ಬಳಿಕ ಅದರಲ್ಲಿ ತಪ್ಪಿದ್ದರೆ ಕ್ಷಮೆ ಕೇಳುವುದಾಗಿ ಹೇಳಿದ್ದಾರೆ. ಇಷ್ಟಾದರೂ ಒಬ್ಬ ಮತಾಂಧ ದೂರು ನೀಡಿದ್ದಕ್ಕೆ ಅದರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರೆ ಸರ್ಕಾರಕ್ಕೆ ಎಷ್ಟು ಧೈರ್ಯ ಇದೆ ಎಂದು ಅವರು ಪ್ರಶ್ನಿಸಿದರು.

ಅಸಾದುದ್ಧೀನ್ ಓವೈಸಿ ದೇಶಕ್ಕೆ ಬೆದರಿಕೆ ಹಾಕುತ್ತಾರೆ. ಆಂಧ್ರಪ್ರದೇಶದಲ್ಲಿ ಮೌಲ್ವಿ ಸರ್ಕಾರಕ್ಕೆ ಬೆದರಿಕೆ ಹಾಕುತ್ತಾನೆ. ಸುಪ್ರೀಂ ಕೋರ್ಟ್ ಆದೇಶಕ್ಕೆ ಬೆಲೆ ಕೊಡಲ್ಲ ಎಂದು ಕೆಲವರು ಹೇಳುತ್ತಾರೆ. ದೇವೇಗೌಡರನ್ನೇ ಖರೀದಿ ಮಾಡುತ್ತೇನೆಂದು ಸಚಿವ ಜಮೀರ್ ಹೇಳಿದ್ದರು. ಆದರೆ ಸರ್ಕಾರ ಅದರ ವಿರುದ್ಧ ಕ್ರಮ ವಹಿಸಿಲ್ಲ. ಒಕ್ಕಲಿಗರ ವಿರುದ್ಧ ಕಾಂಗ್ರೆಸ್ ದ್ವೇಷ ಸಾಧಿಸುವುದು ಹೇಯ. ಸರ್ಕಾರ ಸ್ವಾಮೀಜಿಯವರನ್ನು ಮುಟ್ಟುವ ಕೆಲಸ ಮಾಡಿದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ಎಚ್ಚರಿಕೆ ನೀಡಿದರು.

ಪಾಕಿಸ್ತಾನಕ್ಕೆ ಜೈಕಾರ ಹಾಕಿದವರ ವಿರುದ್ಧ ಸರ್ಕಾರ ಕ್ರಮ ವಹಿಸಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮಯಕ್ಕೆ ತಕ್ಕಂತೆ ಬದಲಾಗುತ್ತಾರೆ. ಒಮ್ಮೆ ಒಕ್ಕಲಿಗರ ಪರ ಮಾತಾಡಿದರೆ, ಮತ್ತೆ ಭಯೋತ್ಪಾದಕರನ್ನು ಬ್ರದರ್ ಎನ್ನುತ್ತಾರೆ. ಆದರೆ ಬಿಜೆಪಿ ಎಂದಿಗೂ ಹಿಂದೂಗಳ ಪರ ನಿಲ್ಲಲಿದೆ ಎಂದರು.

ಸ್ವಾಮೀಜಿಯವರಿಗೆ ತಿಳಿ ಹೇಳುವ ಬದಲು ಪೊಲೀಸರು ನೋಟಿಸ್ ನೀಡಿದ್ದಾರೆ. ಈಗ ಒಕ್ಕಲಿಗ ಸಮುದಾಯ ಎಚ್ಚೆತ್ತುಕೊಳ್ಳಬೇಕಿದೆ. ಸಮುದಾಯದ ವಿರುದ್ಧ ಸರ್ಕಾರ ಈ ರೀತಿ ದ್ವೇಷ ಕಾರುತ್ತಿರುವುದನ್ನು ಸಮುದಾಯದ ಜನರು ಗಮನಿಸಬೇಕಿದೆ. ಸ್ವಾಮೀಜಿಗೆ ಕಿರುಕುಳ ನೀಡಿದರೆ ಬಿಜೆಪಿ ಬೀದಿಗಿಳಿದು ಹೋರಾಟ ಮಾಡಲಿದೆ ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8396 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment