ಬೆಂಗಳೂರಿನಲ್ಲಿ ರಸ್ತೆಯಲ್ಲಿ ಕಸ ಹಾಕುವವರ ವಿರುದ್ಧ ಕೇಸ್ ದಾಖಲಿಸಲಾಗುವುದು ಎಂದು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಕಸ ಸಂಗ್ರಹಿಸುವವರ ಬಳಿ ಹೋಗದೇ ರಸ್ತೆಯಲ್ಲಿ ಕಸ ಬಿಸಾಡುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಅಂತಹವರನ್ನು ಗುರುತಿಸಿ ನೋಟಿಸ್ ಕೊಡುವುದು ಕೇಸ್ ಹಾಕವ ಕೆಲಸ ಮಾಡಲಾಗುವುದು ಎಂದರು.
ಬೆಂಗಳೂರಿನಲ್ಲಿ ಕಸ ರಸ್ತೆಯಲ್ಲಿ ಹಾಕುವುದನ್ನು ತಡೆಯಲು ಹೊಸ ಯೋಜನೆ ಜಾರಿಗೆ ತರಲಾಗುತ್ತಿದೆ. ನಗರದ ಎಲ್ಲಾ ರಸ್ತೆಗಳಲ್ಲಿ ಸಿಸಿಟಿವಿ ಜೊತೆ ಎಲ್ ಇಡಿ ಬಲ್ಪ್ ಹಾಕಲಾಗುವುದು. ಇದರಿಂದ ಕಸ ಹಾಕುವವರ ಮುಖ ಸ್ಪಷ್ಟವಾಗಿ ಗೊತ್ತಾಗುವಂತೆ ಮಾಡಲಾಗುವುದು ಎಂದು ಅವರು ಹೇಳಿದರು.