Thursday, May 14, 2026
Google search engine
Homeರಾಜ್ಯ2ನೇ ಮದುವೆ ಆಗಿದ್ದರೂ ಅಕ್ರಮ ಸಂಬಂಧ: ಬ್ಲಾಕ್ ಮೇಲ್ ಗೆ ಹೆದರಿ ಮಗನ ಜೊತೆ ತಾಯಿ...

2ನೇ ಮದುವೆ ಆಗಿದ್ದರೂ ಅಕ್ರಮ ಸಂಬಂಧ: ಬ್ಲಾಕ್ ಮೇಲ್ ಗೆ ಹೆದರಿ ಮಗನ ಜೊತೆ ತಾಯಿ ಆತ್ಮಹತ್ಯೆ

ಗಂಡನ ಸಾವಿನ ಹಿನ್ನೆಲೆಯಲ್ಲಿ ಮೈದುನನ್ನೇ ಮದುವೆ ಆಗಿದ್ದರೂ ಮತ್ತೊಂದು ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಬ್ಲಾಕ್ ಮೇಲ್ ಗೆ ಹೆದರಿ 8 ವರ್ಷದ ಮಗನ ಜೊತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರಿನ ಶಿರಾದ ಕಳ್ಳಂಬೆಳ್ಳದಲ್ಲಿ ಹಂಸಲೇಖ (32) ಹಾಗೂ 8 ವರ್ಷದ ಪುತ್ರ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಂಸಲೇಖ ಭೂಪಸಂದ್ರ ಗ್ರಾಮದ ನಾಗೇಶ್ ಜೊತೆ ಮದುವೆಯಾಗಿದ್ದು, ಇಬ್ಬರು ಗಂಡು ಮಕ್ಕಳಿದ್ದರು. ಕೆಲವು ವರ್ಷಗಳ ಹಿಂದೆ ನಾಗೇಶ್ ಅನಾರೋಗ್ಯದಿಂದ ಮೃತಪಟ್ಟಿದ್ದರು. ಮೂರು ವರ್ಷದ ಹಿಂದೆ ನಾಗೇಶ್ ಸಹೋದರ ಲೋಕೇಶ್​ ಜತೆ ಹಂಸಲೇಖಗೆ ಮದುವೆ ಮಾಡಲಾಗಿತ್ತು.

ಗಂಡ ತೀರಿಕೊಂಡ ಬಳಿಕ ಮಹಿಳೆಯು ಆತನ ಸಹೋದರನನ್ನೇ ಮದುವೆಯಾಗಿದ್ದಳು. ಮಲ್ಲಿಕಾರ್ಜುನ ಎಂಬಾತನೊಂದಿಗೆ ಹಂಸಲೇಖ ಸಂಪರ್ಕ ಹೊಂದಿದ್ದಳು ಎನ್ನಲಾಗಿದೆ. ಆತ ತನ್ನ ಬಳಿ ಇರುವ ಸಂಭಾಷಣೆ ಮತ್ತು ವೀಡಿಯೊಗಳನ್ನು ಮುಂದಿಟ್ಟು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಭಯಗೊಂಡ ಹಂಸಲೇಖ ಮಗನೊಂದಿಗೆ ಮನೆ ತೊರೆದು ಸ್ನೇಹಿತೆಯ ಮನೆಯಲ್ಲಿ ಉಳಿದುಕೊಂಡಿದ್ದಳು. ಮರುದಿನ ಬೆಳಗ್ಗೆ ಕಳ್ಳಂಬೆಳ್ಳ ಕೆರೆಯಲ್ಲಿ ತಾಯಿ–ಮಗ ಇಬ್ಬರೂ ನೀರಿಗೆ ಹಾರಿ ರುವುದು ಗೊತ್ತಾಗಿದೆ.

ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ಕೆರೆಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದರು.

ತನಿಖೆ ನಡೆಸುತ್ತಿರುವ ಪೊಲೀಸರು, ಬ್ಲ್ಯಾಕ್‌ಮೇಲ್ ಆರೋಪದ ಕುರಿತು ತನಿಖೆ ಆರಂಭಿಸಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments