Monday, June 1, 2026
Google search engine
Homeಬೆಂಗಳೂರುರಾಜ್ಯದಲ್ಲಿ ಸಮಗ್ರ ಮರಳು ನೀತಿ ಜಾರಿ: ಕೈಗೆಟಕುವ ದರದಲ್ಲಿ ಮರಳು ದರ ನಿಗದಿಪಡಿಸಿ ಆದೇಶ

ರಾಜ್ಯದಲ್ಲಿ ಸಮಗ್ರ ಮರಳು ನೀತಿ ಜಾರಿ: ಕೈಗೆಟಕುವ ದರದಲ್ಲಿ ಮರಳು ದರ ನಿಗದಿಪಡಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಮರಳು ನೀತಿ ಜಾರಿಗೊಳಿಸಿದ್ದು, ಆಯವ್ಯಯದಲ್ಲಿ ಘೋಷಿಸಿರುವಂತೆ ಈ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರತಿ ಮೆಟ್ರಿಕ್ ಟನ್ ಮರಳಿನ ಮಾರಾಟ ಬೆಲೆಯನ್ನು 300 ರೂ. ನಿಗದಿಪಡಿಸಲಾಗಿದೆ ಮತ್ತು ಸದರಿ ವ್ಯವಸ್ಥೆಯು ಪ್ರಸ್ತುತ ಜಾರಿಯಲ್ಲಿರುತ್ತದೆ ಎಂದರು.

ರಾಜ್ಯ ಸರ್ಕಾರದ ಮರಳು ನೀತಿಯಂತೆ ಈಗಾಗಲೇ ಸಾರ್ವಜನಿಕ ಹಾಗೂ ಸ್ಥಳೀಯ ಸರ್ಕಾರಿ ಕಾಮಗಾರಿಗಳಿಗೆ ನಿಗದಿತ ಕಡಿಮೆ ಬೆಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮರಳು ಪೂರೈಸಲು 1, 2 ಮತ್ತು 3ನೇ ಶ್ರೇಣಿಯ ಹಳ್ಳ ಪಾತ್ರಗಳಲ್ಲಿ ಲಭ್ಯವಿರುವ ಮರಳನ್ನು ತೆಗೆದು ವಿಲೇವಾರಿ ಮಾಡುವ ಜವಬ್ದಾರಿಯನ್ನು ಆಯಾ ಗ್ರಾಮ ಪಂಚಾಯಿತಿಗಳಿಗೆ ವಹಿಸಿಸಲಾಗಿದೆ.

4, 5 ಮತ್ತು ಉನ್ನತ ಶ್ರೇಣಿಗಳ ಹಳ್ಳ / ನದಿಗಳ ಪಾತ್ರಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್ ಗಳನ್ನು ಸರ್ಕಾರದಿಂದ ಅಧಿಸೂಚಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ ಸರ್ಕಾರಿ ಇಲಾಖೆಗಳಿಗೆ ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಇದೆ ರೀತಿ ಸಾರ್ವಜನಿಕ/ ಖಾಸಗಿ ಸಂಸ್ಥೆಗಳಿಗೆ ಟೆಂಡರ್ ಮೂಲಕ ಮರಳು ಬ್ಲಾಕ್‌ಗಳನ್ನು ವಿಲೇಪಡಿಸುವ ನಿಯಮದಲ್ಲಿ ತಿದ್ದುಪಡಿ ಮಾಡಲಾಗಿದೆ ಎಂದು ಸಚಿವರು ವಿವರಿಸಿದರು.

ನೂತನ ನೀತಿಯಂತೆ ಮರಳು ಬ್ಲಾಕ್‌ಗಳ ಟೆಂಡರನ್ನು ಆಯಾ ಜಿಲ್ಲಾ ಮರಳು ಸಮಿತಿಯಿಂದ ನಡೆಸಲಾಗುವುದು. ಜಿಲ್ಲಾವಾರು ಗುರುತಿಸಲಾಗುವ ಮರಳು ಬ್ಲಾಕ್‌ಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಇತರೆ ಸಾಮಾನ್ಯ ವರ್ಗದವರಿಗೆ ರೋಸ್ಟರ್ ಪದ್ಧತಿಯಡಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯಾದ್ಯಂತ ಪ್ರತಿ ಮೆ.ಟನ್ ಮರಳು ಏಕ ರೂಪ ಮಾರಾಟ ದರ 850 ರೂ.  ನಿಗದಿಪಡಿಸಲಾಗಿದೆ. ಸರ್ಕಾರವು ನಿಗದಿಪಡಿಸುವ ಮಾರಾಟ ಬೆಲೆಯ ಮೊತ್ತದ ಶೇ.50ರಷ್ಟನ್ನು ಸೀಲಿಂಗ್ ಪ್ರೈಸ್ ಎಂದು ಹಾಗೂ ಸೀಲಿಂಗ್ ಪ್ರೈಸ್‌ನ ಶೇ. 60ರಷ್ಟನ್ನು ಸೀಲಿಂಗ್ ಪ್ರೈಸ್ ಎಂದು ನಿಗದಿಪಡಿಸಲಾಗಿರುತ್ತದೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments