ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಹೇಮಂತ್ ಸೊರೆನ್ ಸಾರಥ್ಯದ ಜೆಎಂಎಂ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಕಾಂಗ್ರೆಸ್ ಅತೀ ಹೆಚ್ಚು 70 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.
ಜಾರ್ಖಂಡ್ ಮುಕ್ತಿ ಮೋರ್ಚಾ ಮುಖ್ಯಸ್ಥ ಹಾಗೂ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಇಂಡಿಯಾ ಮೈತ್ರಿಕೂಟದ ಸೀಟು ಹಂಚಿಕೆಯನ್ನು ಘೋಷಿಸಿದರು.
ಸೀಟು ಹಂಚಿಕೆ ಅಂತಿಮ ತೀರ್ಮಾನವಾಗಿಲ್ಲ. ಕಾಂಗ್ರೆಸ್ ಪಕ್ಷದ ಮುಖಂಡರು ಸದ್ಯಕ್ಕೆ ಬಂದಿಲ್ಲ. ಹಾಗಾಗಿ ಮುಂದಿನ ದಿನಗಳಲ್ಲಿ ಸೀಟು ಹಂಚಿಕೆ ಕುರಿತು ನಿರ್ಧರಿಸಲಾಗುವುದು. ಕಾಂಗ್ರೆಸ್ ಪಕ್ಷಕ್ಕೆ 70 ಸ್ಥಾನ ಬಿಟ್ಟುಕೊಡಲಾಗಿದ್ದು, ಉಳಿದ 11 ಸ್ಥಾನಗಳಲ್ಲಿ ಜೆಎಂಎಂ ಮತ್ತು ಆರ್ ಜೆಡಿ ಹಂಚಿಕೊಳ್ಳಬೇಕಿದೆ ಎಂದು ಹೇಳಿದರು.