Monday, June 29, 2026
Google search engine
Homeಅಪರಾಧಮಂಗಳೂರಿನಲ್ಲಿ ಉದ್ಯಮಿ ಪತ್ನಿ-ಮಗನ ಕಿಡ್ನಾಪ್: 20 ಲಕ್ಷ ಮೌಲ್ಯದ ಚಿನ್ನ ದೋಚಿ ಪರಾರಿ

ಮಂಗಳೂರಿನಲ್ಲಿ ಉದ್ಯಮಿ ಪತ್ನಿ-ಮಗನ ಕಿಡ್ನಾಪ್: 20 ಲಕ್ಷ ಮೌಲ್ಯದ ಚಿನ್ನ ದೋಚಿ ಪರಾರಿ

ಮಂಗಳೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರ ಬೈಕಂಪಾಡಿಯಲ್ಲಿ ಸೋಮವಾರ ಸಿನಿಮೀಯ ರೀತಿಯಲ್ಲಿ ನಡೆದ ದರೋಡೆ ಪ್ರಕರಣ ವ್ಯಾಪಕ ಆತಂಕಕ್ಕೆ ಕಾರಣ ಆಗಿದೆ.

ಉದ್ಯಮಿಯೊಬ್ಬರ ಕಾರ ಅನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು ಅವರ ಪತ್ನಿ ಹಾಗೂ ಮಗನನ್ನು ಕಾರಿನಲ್ಲೇ ಅಪಹರಿಸಿ, ಚಿನ್ನಾಭರಣ ದೋಚಿದ ಬಳಿಕ ರಸ್ತೆ ಬದಿಯಲ್ಲಿ ಬಿಟ್ಟು ಪರಾರಿ ಆಗಿದೆ.

ದರೋಡೆಗೆ ಒಳಗಾದವರು ಕೇರಳ ಮೂಲದವರಾಗಿದ್ದು, ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಉದ್ಯಮ ನಡೆಸುತ್ತಿದ್ದಾರೆ. ಅವರು ಪತ್ನಿ ಹಾಗೂ ಮಗನ ಜತೆಗೆ ಕಾರಿನಲ್ಲಿ ಸಾಂಗ್ಲಿಯಿಂದ ಪಯ್ಯನ್ನೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಬೈಕಂಪಾಡಿ ಜಂಕ್ಷನ್ ಸಮೀಪದ ಹೋಟೆಲ್ ಬಳಿ ತಲುಪುತ್ತಿದ್ದಂತೆ ಇನ್ನೋವಾ ಕಾರಿನಲ್ಲಿ ಬಂದ ಸುಮಾರು ಏಳು ಮಂದಿ ದುಷ್ಕರ್ಮಿಗಳು ಅವರ ಕಾರಅನ್ನು ಅಡ್ಡಗಟ್ಟಿದ್ದಾರೆ. ಬಳಿಕ ಉದ್ಯಮಿಯನ್ನು ಬಲವಂತವಾಗಿ ಕಾರಿನಿಂದ ಕೆಳಗಿಳಿಸಿದ ಆರೋಪಿಗಳು, ಪತ್ನಿ ಮತ್ತು ಮಗ ಇದ್ದ ಕಾರನ್ನು ಅಪಹರಿಸಿ ಪಣಂಬೂರು ಬೀಚ್ ರಸ್ತೆಯತ್ತ ತೆರಳಿದ್ದರು.

ಕಾರಿನಲ್ಲಿದ್ದ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ದರೋಡೆಕೊರರು ದೋಚಿದ್ದಾರೆ. ಮಹಿಳೆ ಧರಿಸಿದ್ದ ಚಿನ್ನದ ಸರ ಹಾಗೇಯೇ ಬಿಟ್ಟಿದ್ದಾರೆ. ಬಳಿಕ ತಾಯಿ ಮತ್ತು ಮಗನನ್ನು ಸುರಕ್ಷಿತವಾಗಿ ರಸ್ತೆ ಬದಿಯಲ್ಲಿ ಇಳಿಸಿ, ಪರಾರಿ ಆಗಿದ್ದಾರೆ ಎಂದು ತಿಳಿದು ಬಂದಿದೆ

ಘಟನೆಯ ಬಳಿಕ ವಿಕಾಸ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕಾರಿನಲ್ಲಿದ್ದ 180 ಗ್ರಾಂ ಚಿನ್ನ ಹಾಗೂ ನಗದು ಸೇರಿ ಒಟ್ಟು ಸುಮಾರು 20 ಲಕ್ಷ ಮೌಲ್ಯದ ಸ್ವತ್ತುಗಳನ್ನು ದುಷ್ಕರ್ಮಿಗಳು ಕೊಂಡೊಯ್ದಿದ್ದಾರೆ ಎಂದು ತಿಳಿಸಿದ್ದಾರೆ.

ಘಟನೆ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ಸಿಸಿಟಿವಿ ದೃಶ್ಯಗಳು ಹಾಗೂ ಇತರ ತಾಂತ್ರಿಕ ಸಾಕ್ಷ್ಯಗಳ ಆಧಾರದಲ್ಲಿ ಆರೋಪಿಗಳ ಚಲನವಲನವನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಕಳವಾದ ಕಾರು ಹಾಗೂ ಚಿನ್ನಾಭರಣಗಳ ಪತ್ತೆಗೆ ಪೊಲೀಸರು ವ್ಯಾಪಕ ಶೋಧ ಕಾರ್ಯ ಮುಂದುವರೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments