Wednesday, May 27, 2026
Google search engine
Homeರಾಜ್ಯರಾಜ್ಯದ ಜನಸಂಖ್ಯೆಯಲ್ಲಿ ಮುಸ್ಲಿಮರೇ ನಂ.1, ಲಿಂಗಾಯತರಿಗೆ 2ನೇ ಸ್ಥಾನ!

ರಾಜ್ಯದ ಜನಸಂಖ್ಯೆಯಲ್ಲಿ ಮುಸ್ಲಿಮರೇ ನಂ.1, ಲಿಂಗಾಯತರಿಗೆ 2ನೇ ಸ್ಥಾನ!

ಬೆಂಗಳೂರು: ರಾಜ್ಯದ ಜನಸಂಖ್ಯೆಯಲ್ಲಿ ಮುಸ್ಲಿಮರೇ ಅಗ್ರಸ್ಥಾನ ಪಡೆದಿದ್ದು, ಲಿಂಗಾಯತರು 2ನೇ ಸ್ಥಾನ ಪಡೆದಿದ್ದಾರೆ ಎಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯಲ್ಲಿ ಬಹಿರಂಗವಾಗಿದೆ.

ಕಳೆದ 9 ವರ್ಷಗಳಿಂದ ನಿರಂತರವಾಗಿ ಸಂಚಲನ ಸೃಷ್ಟಿಸಿದ್ದ ಕರ್ನಾಟಕ ಜಾತಿಗಣತಿ ವರದಿಯನ್ನು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ  ಸ್ವೀಕರಿಸಿದ್ದಾರೆ. ಈ ಮೂಲಕ ವರದಿಯಲ್ಲಿನ ಅಂಶಗಳು ಬಹಿರಂಗಗೊಂಡಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಒಂದು ದಿನ ಮೊದಲೇ ತಮಗಿದ್ದ  ಆಸೆಯದಂತೆ ರಾಜ್ಯ ಹಿಂದುಳಿದ ವರ್ಗಗಳ‌ ಆಯೋಗ ಸಿದ್ದಪಡಿಸಿದ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ” ಯನ್ನು ವಿಧಾನಸೌಧದ ಕಚೇರಿಯಲ್ಲಿ ಬುಧವಾರ  ಸ್ವೀಕರಿಸಿರುವುದು ವಿಶೇಷವಾಗಿದೆ. ಇದರೊಂದಿಗೆ ತಾವು ಅಧಿಕಾರಿದಲ್ಲಿದ್ದಾಗಲೇ ಜಾತಿಗಣತಿ ಸ್ವೀಕಾರ ಮಾಡಿದ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಅವರು ಪಾತ್ರರಾಗಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯವರಿಗೆ ಸಲ್ಲಿಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ಜಾತಿಗಣತಿ ಪ್ರಕಾರ, ರಾಜ್ಯದಲ್ಲಿ ಮುಸ್ಲಿಂ ಅತಿ ದೊಡ್ಡಸಮುದಾಯವಾಗಿದೆ. ಶೇ.14ರಷ್ಟು ಅಂದರೆ ಬರೋಬ್ಬರಿ 75.25 ಲಕ್ಷ ಜಸಂಖ್ಯೆ ಇದ್ದಾರೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ.

ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವರದಿ (ಜಾತಿ ಗಣತಿ) ಬಹಿರಂಗವಾಗಿದ್ದು,ವರದಿಯಲ್ಲಿ ಮುಸ್ಲಿಮರೇ ರಾಜ್ಯದಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಸಮುದಾಯವಾಗಿದೆ.

ಜಾತಿವಾರು ಜನಸಂಖ್ಯೆ ವಿವರ:

ಇನ್ನು ಮುಸ್ಲಿಮರು 75 ರಿಂದ‌ 80 ಲಕ್ಷ ಜನಸಂಖ್ಯೆಯೊಂದಿಗೆ ಕರ್ನಾಟಕದಲ್ಲಿ ನಂಬರ್ ಒನ್ ಪ್ರಬಲ ಸಮುದಾಯವಾಗಿದೆ. ವೀರಶೈವ ಲಿಂಗಾಯತ ಶೇ.11ರಷ್ಟು 60 ರಿಂದ 65 ಲಕ್ಷ ಜನಸಂಖ್ಯೆ ಹೊಂದಿದ್ದು ಕರ್ನಾಟಕದಲ್ಲಿ ಎರಡನೇ ಅತಿ ದೊಡ್ಡ ಸಮುದಾಯವಾಗಿದ್ದರೆ, ಶೇ.10ರೊಂದಿಗೆ ಒಕ್ಕಲಿಗರು 55 ರಿಂದ 60 ಲಕ್ಷ ಜನಸಂಖ್ಯೆ ಹೊಂದಿದ 3ನೇ ಸಮುದಾಯವಾಗಿದೆ. ಕುರುಬರು ಸಮುದಾಯ ಶೇ.8ರಷ್ಟು ಇದ್ದು, 40 ರಿಂದ 45 ಲಕ್ಷ ಜನಸಂಖ್ಯೆಯೊಂದಿಗೆ ರಾಜ್ಯದ 4ನೇ ದೊಡ್ಡ ಸಮುದಾಯವಾಗಿದೆ ಎಂದು ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಜಾತಿವಾರು ಜನಸಂಖ್ಯೆ ಬಗ್ಗೆ ಉಲ್ಲೇಖವಾಗಿದೆ.

300 ಪುಟಗಳ ವರದಿ:

ಸಿಎಂಗೆ ಜಾತಿ ಗಣತಿ ವರದಿ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ್ ನಾಯ್ಕ್ , ಎಲ್ಲಾ ವರದಿ ಸಂಪೂರ್ಣ ಆಗಿದ್ದು, ವಿವರ ಹೇಳಲು ಆಗಲ್ಲ. ಓಬಿಸಿ ಸಂಬಂಧ ವರದಿ ಸಂಪೂರ್ಣ ಆಗಿದೆ. ಅದಕ್ಕೂ ಇದಕ್ಕೂ ಸಂಬಂಧ ಇಲ್ಲ. ವರದಿ ಭಾಷಾಂತರ ಆಗಲು ಸಮಯ ಬೇಕಿತ್ತು. ಮೇ 30ಕ್ಕೆ ವರದಿ ನೀಡಲು ನಿರ್ಧರಿಸಲಾಗಿತ್ತು.ಆದ್ರೆ, 29ಕ್ಕೆ ರಜೆ ಇದೆ ಅಂತ ಇಂದೇ ಸಲ್ಲಿಕೆ ಮಾಡಲಾಯಿತು. 300 ಪುಟಗಳಷ್ಟು ವರದಿ ಇದೆ. ಸಂಪೂರ್ಣವಾಗಿ ಸರ್ವೇ ಆಗಿದ್ದು, ಭಾಗಿಯಾಗದವರ ಬಗ್ಗೆ ನಾವು ಏನೂ ಮಾಡಲು ಆಗಲ್ಲ. ಇದರಿಂದ ಅಂಕಿ ಸಂಖ್ಯೆ ಕಡಿಮೆ ಆಗಬಹುದಾದ ಸಾಧ್ಯತೆ ಇದೆ. ಪ್ರಾಮಾಣಿಕವಾಗಿ ವರದಿ ನೀಡಿದ್ದೇವೆ. ಆದಷ್ಟು ಬೇಗ ವರದಿಯನ್ನು ಸ್ವೀಕಾರ ಮಾಡುವ ಭರವಸೆ ಇದೆ ಎಂದರು.

ಸಾಮಾಜಿಕ ನಿರ್ಲಕ್ಷ್ಯ:

ಮುಸ್ಲಿಂ ಒಂದು ಧರ್ಮ ಹಾಗೂ ಮುಸ್ಲಿಮರು ಸಾಮಾಜಿಕವಾಗಿ ನಿರ್ಲಕ್ಷ್ಯಕ್ಕೆ ಒಳಗಾಗಿಲ್ಲ. ಹೀಗಾಗಿ ಅವರಿಗೆ ಮೀಸಲಾತಿ ನೀಡುವ ಅಗತ್ಯವಿಲ್ಲ ಎಂದು ಹೇಳಿ 1974ರಲ್ಲಿ ಹಾವನೂರು ಆಯೋಗದ ವರದಿಯು ಲಿಂಗಾಯತ, ಕ್ರಿಶ್ಚಿಯನ್‌ ಹಾಗೂ ಮುಸ್ಲಿಮರಿಗೆ ಮೀಸಲಾತಿ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಹೋರಾಟ ನಡೆಸಿದ ಬಳಿಕ 1985ರಲ್ಲಿ ಸುಪ್ರೀಂ ಕೋರ್ಟ್‌ ಹಾವನೂರು ಆಯೋಗದ ವರದಿಯಲ್ಲೇ ಮುಸ್ಲಿಮರು ಶಿಕ್ಷಣ ಹಾಗೂ ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿರುವುದಾಗಿ ತಿಳಿಸಲಾಗಿದೆ.

ಹೀಗಾಗಿ ಎಲ್ಲಾ ಹಿಂದುಳಿದ ವರ್ಗಗಳಂತೆ ಮುಸ್ಲಿಮರನ್ನೂ ಪರಿಗಣಿಸಿ ಮೀಸಲಾತಿಗೆ ಅರ್ಹರನ್ನಾಗಿ ಮಾಡಬೇಕು ಎಂದು ಹೇಳಿತ್ತು. ಬಳಿಕ ನೇಮಕವಾದ ವೆಂಕಟಸ್ವಾಮಿ ಆಯೋಗ ಹಾಗೂ ಚಿನ್ನಪ್ಪರೆಡ್ಡಿ ಆಯೋಗದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗದ ಜಾತಿ ಎಂದೇ ಪರಿಗಣಿಸಲಾಗಿದೆ.
ಹೀಗಾಗಿ ಕಾಂತರಾಜು ಆಯೋಗ ಹಾಗೂ ಜಯಪ್ರಕಾಶ್‌ ಹೆಗ್ಡೆ ನೇತೃತ್ವದ ಆಯೋಗವು ಮುಸ್ಲಿಮರನ್ನು ಜಾತಿ ಎಂದೇ ಪರಿಗಣಿಸಿದ್ದಾರೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮೂಲಗಳು ತಿಳಿಸಿದ್ದವು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments