Thursday, November 21, 2024
Google search engine
Homeಕ್ರೀಡೆ17 ವರ್ಷದ ನಂತರ ಟಿ-20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದ ಭಾರತ!

17 ವರ್ಷದ ನಂತರ ಟಿ-20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದ ಭಾರತ!

ಜಿದ್ದಾಜಿದ್ದಿನ ಪಂದ್ಯದಲ್ಲಿ ತೂಗುಯ್ಯಾಲೆಯಾಗಿದ್ದ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ ಗಳಿಂದ ಟಿ-20 ವಿಶ್ವಕಪ್ 6 ವಿಕೆಟ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಟಿ-20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಮೂಲಕ 17 ವರ್ಷಗಳ ನಂತರ ಮತ್ತೊಮ್ಮೆ ಕಿರು ಕ್ರಿಕೆಟ್ ದೊರೆ ಪಟ್ಟ ಅಲಂಕರಿಸಿದೆ.

ಗಯಾನಾದಲ್ಲಿ ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ಭಾರತ ತಂಡ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 170 ರನ್ ಕಲೆಹಾಕಿತು. ವಿಶ್ವಕಪ್ ಫೈನಲ್ ನಲ್ಲಿ ಅತ್ಯಧಿಕ ಮೊತ್ತ ದಾಖಲಿಸಿದ ಗೌರವಕ್ಕೆ ಭಾರತ ಪಾತ್ರವಾಯಿತು. ಈ ಹಿಂದೆ ವಿಶ್ವಕಪ್ ನಲ್ಲಿ 173 ರನ್ ಬಂದಿದ್ದೇ ಗರಿಷ್ಠ ಮೊತ್ತವಾಗಿತ್ತು.

ಕಠಿಣ ಗುರಿ ಬೆಂಬತ್ತಿದ ದಕ್ಷಿಣ ಆಫ್ರಿಕಾ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಭಾರತ 2007ರ ಚೊಚ್ಚಲ ಟಿ-20 ವಿಶ್ವಕಪ್ ಗೆದ್ದ ನಂತರ ಬಂದ ಮೊದಲ ಪ್ರಶಸ್ತಿಯಾಗಿದೆ. ಅಲ್ಲದೇ ಭಾರತಕ್ಕೆ ಒಲಿದ ಒಟ್ಟಾರೆ 4ನೇ ಹಾಗೂ ರೋಹಿತ್ ಶರ್ಮ ನಾಯಕತ್ವದಲ್ಲಿ ಒಲಿದ ಮೊದಲ ವಿಶ್ವಕಪ್ ಆಗಿದೆ.

ಭಾರತ ತಂಡ 34 ರನ್ ಕಲೆ ಹಾಕುವಷ್ಟರಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತದಿಂದ ತತ್ತರಿಸಿತು. ಆದರೆ ರನ್ ಬರ ಎದುರಿಸುತ್ತಿದ್ದ ವಿರಾಟ್ ಕೊಹ್ಲಿ ಮತ್ತು ಅಕ್ಸರ್ ಪಟೇಲ್ ನಾಲ್ಕನೇ ವಿಕೆಟ್ ಗೆ 72 ರನ್ ಜೊತೆಯಾಟದಿಂದ ತಂಡವನ್ನು ಕುಸಿತದಿಂದ ಪಾರು ಮಾಡಿದರು.

ಅಕ್ಸರ್ ಪಟೇಲ್ 31 ಎಸೆತಗಳಲ್ಲಿ 1 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 47 ರನ್ ಗಳಿಸಿದ್ದಾಗ ಇಲ್ಲದ ರನ್ ಕದಿಯುವ ಯತ್ನದಲ್ಲಿ ರನೌಟ್ ಆದರೆ, ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 6 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ 76 ರನ್ ಬಾರಿಸಿ ಔಟಾದರು.

ಶಿವಂ ದುಬೆ 16 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಸೇರಿದ 27 ರನ್ ಗಳಿಸಿದರೆ, ದಕ್ಷಿಣ ಆಫ್ರಿಕಾ ಪರ ಏರ್ನಿಚ್ ನೊರ್ಚೆ 2 ಮತ್ತು ಕೇಶವ್ ಮಹರಾಜ್ ತಲಾ 2 ವಿಕೆಟ್ ಗಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments