Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ರಾಜ್ಯ

ಭಾರತ-ಯುರೋಪ್ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದದಿಂದ ಕರ್ನಾಟಕಕ್ಕೆ ಭಾಗ್ಯದ ಬಾಗಿಲು ಓಪನ್:‌ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 17 ವೀಕ್ಷಣೆಗಳು
HD Kumaraswamy

ನವದೆಹಲಿ: ಭಾರತ-ಯುರೋಪ್ ಒಕ್ಕೂಟದ (India–EU FTA) ನಡುವೆ ಏರ್ಪಟ್ಟಿರುವ ಮುಕ್ತ ವ್ಯಾಪಾರ ಒಪ್ಪಂದವು ಭಾರತಕ್ಕೆ ವರವಾಗಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮದರ್‌ ಆಫ್‌ ಆಲ್‌ ಡೀಲ್ಸ್ ಎಂದೇ ಕರೆಯಲ್ಪಟ್ಟಿರುವ ಈ ಒಪ್ಪಂದವು ಭಾರತ ಮತ್ತು ಯುರೋಪ್ ಒಕ್ಕೂಟದ ನಡುವಿನ ವ್ಯಾಪಾರ ರೇಖೆಯನ್ನು ಮತ್ತಷ್ಟು ಸರಳವಾಗಿಸುತ್ತದೆ ಹಾಗೂ ಯುರೋಪ್ ಜತೆಗಿನ ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ ಎಂದು ಹೇಳಿದ್ದಾರೆ.

ಈ ಒಪ್ಪಂದದ ಭಾಗವಾಗಿ ಉತ್ಪಾದನೆ, ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರದಲ್ಲಿ ಮುಂಚೂಣಿ ರಾಜ್ಯವಾಗಿರುವ ಕರ್ನಾಟಕಕ್ಕೆ ವರದಾನವಾಗಲಿದೆ, ಹೊಸ ಅವಕಾಶಗಳ ಭಾಗ್ಯದ ಬಾಗಿಲು ತೆರೆಯಲಿದೆ ಎಂದು ಅವರು ಹೇಳಿದ್ದು, ಇದು ವ್ಯಾಪಾರ ವಹಿವಾಟಿನಲ್ಲಿ ಹೊಸ ಶಕೆಗೆ ನಾಂದಿ ಹಾಡಲಿದೆ ಎಂದು ತಿಳಿಸಿದ್ದಾರೆ.

ನರೇಂದ್ರ ಮೋದಿ ಪ್ರಧಾನಿಗಳಾದ ಮೇಲೆ ಭಾರತೀಯ ಕೈಗಾರಿಕೆ ಕ್ಷೇತ್ರದ ಬೆಳವಣಿಗೆಯಲ್ಲಿ ಪರಿವರ್ತನಾತ್ಮಕ ಅಭಿವೃದ್ಧಿ ಕಂಡು ಬಂದಿದೆ. ಈಗ ಭಾರತ ಮತ್ತು ಯುರೋಪ್ ಒಕ್ಕೂಟದ ನಡುವೆ ಏರ್ಪಟ್ಟಿರುವ ಮುಕ್ತ ವ್ಯಾಪಾರ ಒಪ್ಪಂದಿಂದ ಈ ಅಭಿವೃದ್ಧಿ ಮತ್ತೊಂದು ಉನ್ನತ ಸ್ತರಕ್ಕೆ ಏರಲಿದೆ ಎನ್ನುವ ವಿಶ್ವಾಸವನ್ನು ಕೇಂದ್ರ ಸಚಿವರು ವ್ಯಕ್ತಪಡಿಸಿದ್ದಾರೆ.

ಐಟಿ ಬಿಟಿ, ಸೇವಾ ವಲಯ, ಎಂಜಿನಿಯರಿಂಗ್ , ಎಲೆಕ್ಟ್ರಾನಿಕ್ಸ್ ಮತ್ತು ಔಷಧ ಸೇರಿದಂತೆ ಬೆಂಗಳೂರು ಹಾಗೂ ರಾಜ್ಯದ ಇತರ ಭಾಗಗಳಲ್ಲಿ ಕಾರ್ಯಪ್ರವೃತ್ತವಾಗಿರುವ ಕೈಗಾರಿಕೆಗಳಿಗೆ ಈ ಒಪ್ಪಂದವು ಶಕ್ತಿ ತುಂಬಿದೆ ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಭಾರತವೂ ಜಗತ್ತಿನ ನಾಲ್ಕನೇ ಅತಿದೊಡ್ಡ ಆರ್ಥಿಕತೆ ಆಗಿದೆ. ಯುರೋಪಿಯನ್ ಒಕ್ಕೂಟವು ಎರಡನೇ ಬೃಹತ್ ಆರ್ಥಿಕತೆ ಆಗಿದ್ದು, ಈ ಎರಡೂ ಆರ್ಥಿಕತೆಗಳ ನಡುವೆ ಆಗಿರುವ ಒಪ್ಪಂದಿಂದ ಜಾಗತಿಕ ಜಿಡಿಪಿಯಲ್ಲಿ ಶೇಕಡಾ 25ರಷ್ಟು ಪಾಲು ಹೊಂದಿವೆ. ಹಾಗೆಯೇ ಜವಳಿ, ಚಿನ್ನಾಭರಣ, ವಜ್ರ ಇತ್ಯಾದಿ ಉತ್ಪನ್ನಗಳ ವಲಯದಲ್ಲಿ ₹6.41 ಲಕ್ಷ ಕೋಟಿ ವಹಿವಾಟು ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದೊಂದು ಐತಿಹಾಸಿಕ ಒಪ್ಪಂದವಾಗಿದೆ. ಮುಂದಿನ ದಿನಗಳಲ್ಲಿ ಯುರೋಪ್ ನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಹಾಗೂ ಅಲ್ಲಿ ಉದ್ಯೋಗ ಅರಸಿ ಹೋಗುವ ಯುವ ಜನರಿಗೆ ಹೆಚ್ಚು ಅನುಕೂಲ ಆಗಲಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment