Tuesday, May 26, 2026
Google search engine
Homeದೇಶಇಡೀ ದೇಶ ನಿಮಗೆ ಅಭಾರಿಯಾಗಿದೆ: ಯೋಧರಿಗೆ ಪ್ರಧಾನಿ ಮೋದಿ ಪ್ರಶಂಸೆ

ಇಡೀ ದೇಶ ನಿಮಗೆ ಅಭಾರಿಯಾಗಿದೆ: ಯೋಧರಿಗೆ ಪ್ರಧಾನಿ ಮೋದಿ ಪ್ರಶಂಸೆ

ಪಾಕಿಸ್ತಾನ ಕದನ ವಿರಾಮ ಘೋಷಣೆ ಬೆನ್ನಲ್ಲೇ ಪಂಜಾಬ್ ನ ಅಮೃತಸರದಲ್ಲಿರುವ ಅದಂಪುರ್ ವಾಯುನೆಲೆಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಇಡೀ ದೇಶ ನಿಮಗೆ ಅಭಾರಿಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನ ದಾಳಿ ಪ್ರತಿದಾಳಿ ನಂತರ ಕದನ ವಿರಾಮ ಘೋಷಿಸಲಾಯಿತು. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಅದಂಪುರ್ ವಾಯುನೆಲೆಗೆ ಭೇಟಿ ನೀಡಿದ್ದಾರೆ.

ವಾಯುನೆಲೆಗೆ ಭೇಟಿ ನೀಡಿದ ನಂತರ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಇಂದು ಬೆಳಿಗ್ಗೆ ಅದಂಪುರ ವಾಯುನೆಲೆಗೆ ಭೇಟಿ ನೀಡಿ ನಮ್ಮ ದೇಶದ ಧೈರ್ಯಶಾಲಿ ಯೋಧರನ್ನು ಭೇಟಿ ಮಾಡಿದೆ.  ದೇಶದ ಶಸ್ತ್ರಾಸ್ತ್ರ ಪಡೆಯ ಸಾಧನೆಗೆ ಇಡೀ ದೇಶ ಅಭಾರಿಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments