Saturday, August 22, 2026
Google search engine
Homeಕ್ರೀಡೆಐಸಿಸಿ ಏಕದಿನ ಮಹಿಳಾ ವಿಶ್ವಕಪ್ ವೇಳಾಪಟ್ಟ ಪ್ರಕಟ: ಸೆ.30ರಂದು ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ

ಐಸಿಸಿ ಏಕದಿನ ಮಹಿಳಾ ವಿಶ್ವಕಪ್ ವೇಳಾಪಟ್ಟ ಪ್ರಕಟ: ಸೆ.30ರಂದು ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ

ಐಸಿಸಿ ಏಕದಿನ ಮಹಿಳಾ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಪ್ರಕಟವಾಗಿದ್ದು, ಭಾರತ ಮತ್ತು ಶ್ರೀಲಂಕಾ ಜಂಟಿ ಆಶ್ರಯದಲ್ಲಿ ನಡೆಯಲಿದೆ. ದಶಕದ ನಂತರ ಏಕದಿನ ವಿಶ್ವಕಪ್ ಏಷ್ಯಾ ಖಂಡದಲ್ಲಿ ನಡೆಯಲಿದೆ.

ಸೆಪ್ಟೆಂಬರ್ 30, 2025ರಿಂದ ನವೆಂಬರ್ 2ರವರೆಗೆ ನಡೆಯಲಿದ್ದು, ಬೆಂಗಳೂರಿನ 4 ಹಾಗೂ ಶ್ರೀಲಂಕಾದ ಒಂದು ಮೈದಾನದಲ್ಲಿ ಪಂದ್ಯಗಳು ನಡೆಯಲಿದೆ.

ಸೆಪ್ಟೆಂಬರ್ 30ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ನವೆಂಬರ್ 2ರಂದು ನಡೆಯುವ ಫೈನಲ್ ಪಂದ್ಯ ಬೆಂಗಳೂರು ಅಥವಾ ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ನಡೆಯಲಿದೆ.

ಭಾರತದಲ್ಲಿ ನಡೆಯುವ ವಿಶ್ವಕಪ್ ಪಂದ್ಯಗಳು ಬೆಂಗಳೂರು, ಗುವಾಹಟಿ, ಇಂಧೀರ್, ವಿಶಾಖಪಟ್ಟಣದಲ್ಲಿ ನಿಗದಿಯಾಗಿದೆ.

ಭಾರತ, ಆಸ್ಟ್ರೇಲಿಯಾ, ಶ್ರೀಲಂಕಾ, ಇಂಗ್ಲೆಂಡ್, ನ್ಯೂಜಿಲೆಂಡ್, ಪಾಕಿಸ್ತಾನ, ಬಾಂಗ್ಲಾದೇಶ ಸೇರಿದಂತೆ 8 ಪ್ರಮುಖ ತಂಡಗಳು ಪಾಲ್ಗೊಳ್ಳಲಿವೆ. ರೌಂಡ್ ರಾಬಿನ್ ಮಾದರಿಯಲ್ಲಿ ಟೂರ್ನಿ ನಡೆಯಲಿದ್ದು, ಒಟ್ಟು 28 ಪಂದ್ಯಗಳು ನಡೆಯಲಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments