ವನಿತೆಯರ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ-20 ಪಂದ್ಯ ಭಾರೀ ಮಳೆಯಿಂದ ಅರ್ಧದಲ್ಲೇ ಮೊಟಕುಗೊಂಡಿದೆ.
ಚೆನ್ನೈನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ವನಿತೆಯರ ತಂಡ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿತ್ತು. ಗೆಲ್ಲಲು 177 ರನ್ ಗಳ ಗುರಿ ಪಡೆದಿದ್ದ ಭಾರತ ಅಖಾಡಕ್ಕೆ ಇಳಿಯುವ ಮುನ್ನವೇ ಸುರಿದ ಮಳೆ ಪಂದ್ಯವನ್ನು ಬಲಿ ಪಡೆಯಿತು.
ಟಿ-20 ಸರಣಿಯಲ್ಲಿ ದಕ್ಷಿಣ ಆಫ್ರಿಕಾ ವನಿತೆಯರು 1-0ಯಿಂದ ಮುನ್ನಡೆ ಗಳಿಸಿದ್ದು, ಭಾರತ ಈ ಪಂದ್ಯದಲ್ಲಿ ಗೆದ್ದು ಸರಣಿಯಲ್ಲಿ ಸಮಬಲ ಮಾಡಿಕೊಳ್ಳಬಹುದಿತ್ತು. ಆದರೆ ಈ ಪಂದ್ಯ ರದ್ದಾಗಿದ್ದರಿಂದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.
ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ಟಾಸ್ಮಿನ್ ಬರ್ಟ್ಸ್ ಅವರ ಅರ್ಧಶತಕ (52) ಮತ್ತು ಅನ್ನಾಕೆ ಬೋಶ್ (40) ಉತ್ತಮ ಪ್ರದರ್ಶನದಿಂದ ಉತ್ತಮ ಮೊತ್ತ ದಾಖಲಿಸಿತು.