Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ಕ್ರೀಡೆ

india vs west indies: ಕೆರಿಬಿಯನ್ ಪಡೆ ಕಟ್ಟಿ ಹಾಕಿದ ಸಿರಾಜ್, ಬುಮ್ರಾ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 2 ವೀಕ್ಷಣೆಗಳು
mohammed siraj

ಮಧ್ಯಮ ವೇಗಿಗಳಾದ ಮೊಹಮದ್ ಸಿರಾಜ್ ಮತ್ತು ಜಸ್ ಪ್ರೀತ್ ಬುಮ್ರಾ ದಾಳಿಗೆ ತತ್ತರಿಸಿದ ಪ್ರವಾಸಿ ವೆಸ್ಟ್ ಇಂಡೀಸ್ ತಂಡ ಮೊದಲ ದಿನವೇ 162 ರನ್ ಗೆ ಆಲೌಟಾಗಿದೆ.

ಅಹಮದಾಬಾದ್ ನಲ್ಲಿ ಗುರುವಾರ ಆರಂಭಗೊಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ವೆಸ್ಟ್ ಇಂಡೀಸ್ ತಂಡ ಚಹಾ ವಿರಾಮಕ್ಕೂ ಮುನ್ನವೇ ಮೊದಲ ಇನಿಂಗ್ಸ್ ನಲ್ಲಿ 162 ರನ್ ಗೆ ಗಂಟುಮೂಟೆ ಕಟ್ಟಿದೆ.

ಭಾರತ ತಂಡದ ದಾಳಿಗೆ ವಿಂಡೀಸ್ ತಂಡದ ಯಾವೊಬ್ಬ ಆಟಗಾರ ಗಟ್ಟಿಯಾಗಿ ನೆಲೆ ನಿಲ್ಲಲಿಲ್ಲ.  ತಂಡ ನಿಯಮಿತವಾಗಿ ವಿಕೆಟ್ ಕಳೆದುಕೊಂಡು ಕಳಪೆ ಮೊತ್ತಕ್ಕೆ ಪತನಗೊಂಡಿತು.

ವೆಸ್ಟ್ ಇಂಡೀಸ್ ಒಂದು ಹಂತದಲ್ಲಿ 42 ರನ್ ಗೆ 4 ವಿಕೆಟ್ ಕಳೆದುಕೊಂಡು 100ರ ಗಡಿ ದಾಟುವುದು ಕೂಡ ಕಷ್ಟ ಎಂಬ ಪರಿಸ್ಥಿತಿಗೆ ಸಿಲುಕಿತ್ತು. ಈ ಹಂತದಲ್ಲಿ ಜಸ್ಟಿನ್ ಗ್ರೀವ್ಸ್ (32 ರನ್, 48 ಎಸೆತ, 4 ಬೌಂಡರಿ) ಮತ್ತು ಶಾಯಿ ಹೋಪ್ (26 ರನ್, 36 ಎಸೆತ, 3 ಬೌಂಡರಿ) 5ನೇ ವಿಕೆಟ್ ಗೆ 48 ರನ್ ಜೊತೆಯಾಟವಾಡಿ ತಂಡದ ಮೊತ್ತವನ್ನು 100ರ ಗಡಿ ಸಮೀಪ ತಂದು ನಿಲ್ಲಿಸಿದರು.

ಏಷ್ಯಾಕಪ್ ನಲ್ಲಿ 17 ವಿಕೆಟ್ ಪಡೆದು ಮಿಂಚಿದ್ದ ಸ್ಪಿನ್ನರ್ ಕುಲದೀಪ್ ಯಾದವ್ ಈ ಜೋಡಿಯನ್ನು ಬೇರ್ಪಡಿಸಿದ್ದೂ ಅಲ್ಲದೇ 2 ವಿಕೆಟ್ ಪಡೆದು ಗಮನ ಸೆಳೆದರು. ಮೊಹಮದ್ ಸಿರಾಜ್ 4 ವಿಕೆಟ್ ಪಡೆದು ಮಿಂಚಿದರೆ, ಜಸ್ ಪ್ರೀತ್ ಬುಮ್ರಾ 3 ವಿಕೆಟ್ ಗಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment