Friday, May 15, 2026
Google search engine
Homeರಾಜ್ಯಮಾಹಿತಿ ತಂತ್ರಜ್ಞಾನ ಉನ್ನತೀಕರಣ: 2 ದಿನ ಎಸ್ಕಾಂಗಳ ಆನ್‌ ಲೈನ್‌ ಸೇವೆ ಅಲಭ್ಯ

ಮಾಹಿತಿ ತಂತ್ರಜ್ಞಾನ ಉನ್ನತೀಕರಣ: 2 ದಿನ ಎಸ್ಕಾಂಗಳ ಆನ್‌ ಲೈನ್‌ ಸೇವೆ ಅಲಭ್ಯ

ಬೆಂಗಳೂರು: ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್‌ ಲೈನ್‌ ಸೇವೆಗಳಾದ ವಿದ್ಯುತ್‌ ಬಿಲ್‌ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್‌ ಲೈನ್‌ ಆಧರಿತ ಸೇವೆಗಳು ಜುಲೈ 25ರ ರಾತ್ರಿ 8.30 ಗಂಟೆಯಿಂದ ಜುಲೈ 27ರ ರಾತ್ರಿ 10 ಗಂಟೆಯವರೆಗೆ ಲಭ್ಯವಿರುವುದಿಲ್ಲ.

ಎಲ್ಲಾ ಐದು ವಿದ್ಯುತ್‌ ಸರಬರಾಜು ಕಂಪನಿಗಳ ಈ ಕೆಳಕಂಡ ನಗರ ಉಪ ವಿಭಾಗದ ಗ್ರಾಹಕರಿಗೆ ಆನ್‌ ಲೈನ್‌ ಸೇವೆಗಳು ಲಭ್ಯವಿರುವುದಿಲ್ಲಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬೆಸ್ಕಾಂ: ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಉಪ ವಿಭಾಗಗಳು, ಶಿಢ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಸಿರಾ, ಚೆನ್ನಪಟ್ಟಣ, ಆನೇಕಲ್‌, ಮುಳುಬಾಗಿಲು, ಬಂಗಾರಪೇಟೆ, ಗೌರಿಬಿದನೂರು, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್‌, ಚಳ್ಳಕೆರೆ, ಕುಣಿಗಲ್‌ , ಹರಪ್ಪನಹಳ್ಳಿ, ಹರಿಹರ, ಹಿರಿಯೂರು ಮತ್ತು ತಿಪಟೂರು ನಗರ ಉಪ ವಿಭಾಗಗಳ ವ್ಯಾಪ್ತಿಗಳಲ್ಲಿ ಆನ್‌ ಲೈನ್‌ ಸೇವೆಗಳು ಲಭ್ಯವಿರುವುದಿಲ್ಲ.
ಸೆಸ್ಕ್‌ : ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ, ಚನ್ನರಾಯಪಟ್ಟಣ.

ಮೆಸ್ಕಾಂ: ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರು

ಜೆಸ್ಕಾಂ: ಮಾನವಿ, ಸಿಂಧನೂರು, ಬೀದರ್, ಗಂಗಾವತಿ, ಗುಲ್ಬರ್ಗ ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್‌, ಹೊಸಪೇಟೆ
ಹೆಸ್ಕಾಂ : ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಲ್, ದಾಂಡೇಲಿ, ಇಂಡಿ, ಸೌದತ್ತಿ, ಸೇವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್‌, ಮುಧೋಳ, ರಾಣೆಬೆನ್ನೂರು, ವಿಜಾಪುರ.

ಬಿಲ್‌ ಪಾವತಿಗಾಗಿ ಹೆಚಾಗಿ ಬಳಸುವ ಎಲ್ಲಾ ಎಸ್ಕಾಂಗಳ ಜಾಲತಾಣ, ಬೆಸ್ಕಾಂ ಮಿತ್ರ ಮೊಬೈಲ್‌ ಆಪ್‌, ಬೆಂಗಳೂರು ಒನ್‌ ಹಾಗೂ ಕರ್ನಾಟಕ ಒನ್‌ ಕೌಂಟರ್‌ ಗಳಲ್ಲಿ ಈ ಎರಡು ದಿನ ಆನ್‌ ಲೈನ್‌ ಸೇವೆಗಳು ಲಭ್ಯವಿರುವುದಿಲ್ಲ. ಅಡಚಣೆಗಾಗಿ ಗ್ರಾಹಕರು ಸಹಕಾರ ನೀಡಬೇಕೆಂದು ಬೆಸ್ಕಾಂ ಕೋರಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments