ಬೆಂಗಳೂರಿನಲ್ಲಿ ಹಾಡುಹಗಲೇ 7.11 ಕೋಟಿ ರೂ. ದರೋಡೆ ಮಾಡಿದ ಗ್ಯಾಂಗ್ ದರೋಡೆಗೆ ಬಳಸಿದ್ದ ಕಾರು ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂನಲ್ಲಿ ಗುರುವಾರ ಡೇರ್ ಸರ್ಕಲ್ ಬಳಿ ಆರ್ ಬಿಐ ಸೋಗಿನಲ್ಲಿ ಸಿಎಂಎಸ್ ವಾಹನ ತಡೆಗಟ್ಟಿ 7.11 ಕೋಟಿ ರೂ. ದರೋಡೆ ಮಾಡಿದ್ದ ದುಷ್ಕರ್ಮಿಗಳು ಪರಾರಿಯಾಗಿದ್ದರು.
ದರೋಡೆಕೋರರು ಬಳಸಿದ್ದ ಕಾರಿನ ಚಲನವಲನಗಳ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಕಾರಿನ ಬೆನ್ನತ್ತಿದ ಪೊಲೀಸರು ದರೋಡೆಗೆ ಬಳಸಿದ್ದ ಇನ್ನೋವಾ ಕಾರನ್ನು ಚಿತ್ತೂರಿನ ಬಳಿ ಪತ್ತೆ ಹಚ್ಚಿದ್ದು, ಅದನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ದರೋಡೆಗೆ ಬಳಸಿದ ಕಾರಿನ ನಂಬರ್ ಪ್ಲೇಟ್ ಬದಲಾಯಿಸಿದ್ದು, ಉತ್ತರ ಪ್ರದೇಶದ ನಂಬರ್ ಪ್ಲೇಟ್ ಹಾಕಿ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸಿದ್ದರು. ಆದರೆ ಪೊಲೀಸರು ಇನ್ನೋವಾ ಕಾರಿನ ಸುಳಿವು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳು ಚಿತ್ತೂರಿನಲ್ಲಿ ಕಾರನ್ನು ಬಿಟ್ಟು ತಿರುಪತಿಗೆ ಹೋಗಿರುವ ಶಂಕೆ ಇದ್ದು, ತಿರುಪತಿಯಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ವಿಭಾಗದ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಇದೇ ವೇಳೆ ನಂಬರ್ ಬದಲಾಯಿಸಲು ನೆರವಾಗಿದ್ದ ಬೆಂಗಳೂರಿನ ಬಾಣಸವಾಡಿಯಲ್ಲಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಇಬ್ಬರ ವಿಚಾರಣೆ ನಡೆಸಲಾಗುತ್ತಿದೆ. ಅಲ್ಲದೇ ಕರ್ತವ್ಯ ಲೋಪ ತೋರಿದ ಇಬ್ಬರು ಪೊಲೀಸರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಗುರುವಾರಜೆಪಿ ನಗರದ ಹೆಚ್‌ಡಿಎಫ್‌ಸಿ ಬ್ಯಾಂಕ್‌ನಿಂದ ಹಣ ಸಂಗ್ರಹಿಸಿ ಗೋವಿಂದಪುರ ಎಟಿಎಂ ಘಟಕಗಳಿಗೆ ತುಂಬಲು ಸಿಎಂಎಸ್ ಏಜೆನ್ಸಿಯ ನಾಲ್ವರು ಸಿಬ್ಬಂದಿ ತೆರಳುತ್ತಿದ್ದರು. ಮಾರ್ಗ ಮಧ್ಯೆ ವಾಹನ ತಡೆಗಟ್ಟಿ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಆರೋಪಿಗಳು ದರೋಡೆ ಮಾಡಿದ್ದರು.



