Monday, September 28, 2026
Google search engine
Homeರಾಜ್ಯಖಾತೆ ಹಂಚಿಕೆ, ಅದಲು ಬದಲು: ಯಾರಿಗೆ ಯಾವ ಖಾತೆ?

ಖಾತೆ ಹಂಚಿಕೆ, ಅದಲು ಬದಲು: ಯಾರಿಗೆ ಯಾವ ಖಾತೆ?

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರುವ ರಾಜ್ಯದ ನೂತನ ಸಚಿವರಿಗೆ ಖಾತೆ ಹಂಚಿಕೆ ಹಾಗೂ ಖಾತೆ ಬದಲಾವಣೆ ಮಾಡಿ ಗೊಂದಲ ಕೊನೆಗೂ ಬಗೆಹರಿದಿದೆ. ಆದರೆ ಒಬ್ಬ ಮಹಿಳಾ ಸಚಿವರಿಲ್ಲದೇ ಮೊದಲ ಬಾರಿ ಅಧಿವೇಶನ ಎದುರಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ.

ಎರಡನೇ ಹಂತದ ಸಂಪುಟ ಪುನಾರಚನೆಯಲ್ಲಿ ಡಿಕೆ ಶಿವಕುಮಾರ್ ಕ್ಯಾಬಿನೆಟ್ ಸೇರಿದ ನೂತನ ಸಚಿವರಿಗೆ ಯಾವುದೇ ಗೊಂದಲಕ್ಕೆ ಎಡೆಮಾಡಿಕೊಡದೇ  ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.

ಕಳೆದ ಆಗಸ್ಟ್  ವೇಳೆ ಪ್ರಮಾಣವಚನ  ಸ್ವೀಕರಿಸಿದ  19 ನೂತನ ಸಚಿವರಿಗೆ ಖಾತೆ  ನೀಡಬೇಕೆಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪಟ್ಟಿಯನ್ನು ಅಂತಿಮಗೊಳಿಸಿದ್ದು, ರಾಜಭವನದ ಅಂಕಿತ ಹಾಗೂ ಸರ್ಕಾರದ ಅಧಿಕೃತ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ.

ಆದರೆ ಸಚಿವರ ಖಾತೆ ಹಂಚಿಕೆಯಲ್ಲಿ ಕೆಲ ಮಹತ್ವ ಬದಲಾವಣೆ ಮಾಡಲಾಗಿದೆ. ರಾಮಲಿಂಗಾರೆಡ್ಡಿ ಹಾಗೂ ಮುನಿಯಪ್ಪ ಅವರ ಖಾತೆಗಳನ್ನ ಬದಲಾವಣೆ ಮಾಡಲಾಗಿದೆ.

ಹಿರಿಯ ನಾಯಕರು ನಡೆಸುತ್ತಿದ್ದ ಕಸರತ್ತು, ದೆಹಲಿ ಮಟ್ಟದ ಸಭೆಗಳು ಹಾಗೂ ಮುಖ್ಯಮಂತ್ರಿಗಳ ಜೊತೆಗಿನ ಸುದೀರ್ಘ ಚರ್ಚೆಗಳ ನಂತರ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಪ್ರಮುಖ ಇಲಾಖೆಗಳಿಗೆ ಅನುಭವ ಹಾಗೂ ಪ್ರಾದೇಶಿಕ ಸಮತೋಲನವನ್ನು ಆಧರಿಸಿ ನಾಯಕರಿಗೆ ಜವಾಬ್ದಾರಿ ನೀಡಲಾಗಿದ್ದು, ಕೆಲ ಸಚಿವರ ಖಾತೆಗಳನ್ನೂ ಸಹ ಬದಲಾವಣೆ ಮಾಡಲಾಗಿದೆ.

ಖಾತೆ ಬದಲಾವಣೆ

ಪ್ರಮುಖವಾಗಿ ಮೊದಲ ಹಂತದಲ್ಲೇ ಸಚಿವರಾಗಿದ್ದ ಮುನಿಯಪ್ಪ ಹಾಗೂ ರಾಮಲಿಂಗಾರೆಡ್ಡಿ ಅವರು ಖಾತೆ ಬಗ್ಗೆ ಅಸಮಾಧಾನಗೊಂಡಿದ್ದರು. ಆಹಾರ ಇಲಾಖೆ ಕೊಟ್ಟಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರು ಖುದ್ದು ರಾಹುಲ್ ಗಾಂಧಿ ಭೇಟಿ ಮಾಡಿ ಖಾತೆ ಬದಲಾವಣೆಗೆ ಮನವಿ ಮಾಡಿದ್ದರು.

ಇನ್ನು ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಹಂತಕ್ಕೆ ಹೋಗಿದ್ದ ಹಿನ್ನೆಲೆಯಲ್ಲಿ ಇವರಿಬ್ಬರ ಖಾತೆ ಬದಲಾವಣೆ ಮಾಡಲಾಗಿದ್ದು, ಮುನಿಯಪ್ಪ ಅವರಿಗೆ ಆಹಾರ ಸರಬರಾಜು ಬದಲಿಗೆ ಸಮಾಜ ಕಲ್ಯಾಣ ಇಲಾಖೆ ಜವಾಬ್ದಾರಿ ನೀಡಿದ್ದರೆ, ಇನ್ನು ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಬದಲಿಗೆ ಅರಣ್ಯ ಖಾತೆ ನೀಡಲಾಗಿದೆ.

ಕೆಲವರಿಗೆ ಖಾತೆ ಮುಂದುವರಿಕೆ

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಸಚಿವರಾಗಿ ನಿಭಾಯಿಸಿದ್ದ ಖಾತೆಗಳ ಜವಾಬ್ದಾರಿ ನೀಡಲಾಗಿದೆ. ಸತೋಷ್ ಲಾಡ್ (ಕಾರ್ಮಿಕ ಇಲಾಖೆ), ಜಮೀರ್ ಅಹ್ಮದ್ ಖಾನ್ (ವಸತಿ), ಶಿವರಾಜ್ ತಂಗಡಗಿ ( ಕನ್ನಡ ಮತ್ತು ಸಂಸ್ಕೃತಿ), ಎಸ್​​ಎಸ್​ ಮಲ್ಲಿಕಾರ್ಜುನ (ಗಣಿ ಮತ್ತು ಭೂವಿಜ್ಞಾನ), ಮಧುಬಂಗಾರಪ್ಪ (ಪ್ರಾಥಮಿಕ ಶಿಕ್ಷಣ), ಅವರಿಗೆ ಸಿದ್ದರಾಮಯ್ಯ ಸಂಪುಟದಲ್ಲಿ ಹೊಂದಿದ್ದ ಖಾತೆಗಳನ್ನೇ​ ಮತ್ತೆ ನೀಡಿರುವುದು ಗಮನಾರ್ಹವಾಗಿದೆ.

ಯಾರಿಗೆ ಯಾವ ಖಾತೆ

ಲಕ್ಷ್ಮಣ ಸವದಿ- ಸಹಕಾರ ಇಲಾಖೆ

ರಾಮಲಿಂಗರೆಡ್ಡಿ-ಅರಣ್ಯ (ಈ ಹಿಂದೆ ಜಲ ಸಂಪನ್ಮೂಲ)

ಕೆ.ಹೆಚ್.ಮುನಿಯಪ್ಪ-ಸಮಾಜ ಕಲ್ಯಾಣ ಇಲಾಖೆ

ಸಂತೋಷ್ ಲಾಡ್- ಕಾರ್ಮಿಕ ಇಲಾಖೆ

ಯು.ಟಿ.ಖಾದರ್- ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ

ಶಿವರಾಜ್ ತಂಗಡಗಿ- ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ

ಬಸವರಾಜ ರಾಯರೆಡ್ಡಿ-ಉನ್ನತ ಶಿಕ್ಷಣ

ಎಚ್‌.ಸಿ.ಬಾಲಕೃಷ್ಣ-ಪೌರಾಡಳಿತ

ಕೆ.ಎಸ್‌.ಬಸವಂತಪ್ಪ-ಮುಜರಾಯಿ, ಮೀನುಗಾರಿಕೆ

ಎನ್‌.ಚಲುವರಾಯಸ್ವಾಮಿ- ಜಲಸಂಪನ್ಮೂಲ ಇಲಾಖೆ

ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

ಎಸ್‌.ಎಸ್‌.ಮಲ್ಲಿಕಾರ್ಜುನ್‌- ಗಣಿ ಮತ್ತು ಭೂವಿಜ್ಞಾನ ಇಲಾಖೆ

ಬಿ.ನಾಗೇಂದ್ರ-ಯೋಜನೆ & ಸಾಂಖ್ಯಿಕ ಇಲಾಖೆ

ಪಿ.ಎಂ.ನರೇಂದ್ರಸ್ವಾಮಿ-ಕೃಷಿ ಇಲಾಖೆ

ಸಿ.ಪುಟ್ಟರಂಗಶೆಟ್ಟಿ-ಪಶು ಸಂಗೋಪನಾ ಇಲಾಖೆ, ರೇಷ್ಮೆ

ಟಿ.ರಘುಮೂರ್ತಿ-ಪರಿಶಿಷ್ಟ ಪಂಗಡ ಕಲ್ಯಾಣ ಖಾತೆ

ರಿಜ್ವಾನ್‌ ಅರ್ಷದ್‌-ಆಹಾರ & ನಾಗರಿಕ ಪೂರೈಕೆ ಇಲಾಖೆ

ರುದ್ರಪ್ಪ ಲಮಾಣಿ- ಸಕ್ಕರೆ ಮತ್ತು ಜವಳಿ

ಶಿವಲಿಂಗೇಗೌಡ-ಅಬಕಾರಿ ಖಾತೆ

ವಿಜಯಾನಂದ ಕಾಶಪ್ಪನವರ್‌-ಸಣ್ಣ ಕೈಗಾರಿಕೆ

ಜಮೀರ್‌ ಅಹ್ಮದ್‌ ಖಾನ್-ವಸತಿ

ಅಜಯ್ ಸಿಂಗ್-ಸಣ್ಣ ನೀರಾವರಿ, ಐಟಿ ಬಿಟಿ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments