ಗಾಜಾ ಮೇಲೆ ಇಸ್ರೇಲ್ ಏಕಾಏಕಿ ನಡೆಸಿದ ವಾಯುದಾಳಿಯಲ್ಲಿ 114ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ದಕ್ಷಿಣ ಗಾಜಾದಲ್ಲಿ ಅಡಗಿದ್ದ ಹಮಾಸ್, ಪ್ಯಾಲೆಸ್ತೀನ್ ಇಸ್ಲಾಮಿಕ್ ಜಿಹಾದ್ ಉಗ್ರರ ಮೇಲೆ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ.
ಇಸ್ರೇಲ್ ರಾತ್ರೋರಾತ್ರಿ ನಡೆಸಿದ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಮೃತಪಟ್ಟಿದ್ದಾರೆ. ಇದೇ ವೇಳೆ ಜಬೇಲಾ ನಗರದಲ್ಲಿನ ಕ್ಲಿನಿಕ್, ಪ್ರಾರ್ಥನಾ ಮಂದಿರಗಳ ಮೇಲೆ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ 56ಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳು ಮನೆ ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ ಎಂದು ಗಾಜಾ ಹೇಳಿಕೆಯಲ್ಲಿ ಆರೋಪಿಸಿದೆ.
ಮಧ್ಯಪ್ರಾಚ್ಯ ರಾಷ್ಟ್ರಗಳ ಭೇಟಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ನೀಡಿದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಪ್ರವಾಸದ ಮೂರನೇ ದಿನ ಕತಾರ್ ನಲ್ಲಿ ಟ್ರಂಪ್ ತಂಗಿರುವಾಗಲೇ ಈ ದಾಳಿ ನಡೆದಿದೆ.


