Tuesday, March 17, 2026
Google search engine
Homeವಿದೇಶಆಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನ ಬಾಂಬ್‌ ದಾಳಿಗೆ 400 ಮಂದಿ ದುರ್ಮರಣ

ಆಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನ ಬಾಂಬ್‌ ದಾಳಿಗೆ 400 ಮಂದಿ ದುರ್ಮರಣ

ಕಾಬೂಲ್:‌ ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ ನಲ್ಲಿರುವ ಆಸ್ಪತ್ರೆ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 400 ಮಂದಿ ಅಸುನೀಗಿದ್ದು, 250ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಆಫ್ಘಾನಿಸ್ತಾನದ ಮೇಲೆ ಇದೇ ಮೊದಲ ಬಾರಿ ಪಾಕಿಸ್ತಾನ ನಡೆಸಿದ ಅತ್ಯಂತ ಭೀಕರ ದಾಳಿ ಇದಾಗಿದ್ದು, ಕನಿಷ್ಠ ೪೦೦ ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.

ಮಂಗಳವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಪಾಕಿಸ್ತಾನದ ವಾಯುಪಡೆ ವಿಮಾನಗಳು ಪುನರ್ವಸತಿ ಕೇಂದ್ರವಾಗಿದ್ದ ಆಸ್ಪತ್ರೆ ಮೇಲೆ ಬಾಂಬ್‌ ದಾಳಿ ನಡೆಸಿದೆ ಎಂದು ಆಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರ ತಿಳಿಸಿದ್ದಾರೆ.

೨೦೦೦ ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇದಾಗಿತ್ತು ಎಂದು ಆಫ್ಘಾನ್‌ ಸರ್ಕಾರ ಹೇಳಿದೆ.ಆದರೆ ಪಾಕಿಸ್ತಾನ ಈ ಆರೋಪವನ್ನು ನಿರಾಕರಿಸಿದ್ದು, ನಾವು ಯಾವುದೇ ಆಸ್ಪತ್ರೆಯನ್ನು ಗುರಿಯಾಗಿಸಿ ದಾಳಿ ನಡೆಸಿಲ್ಲ ಎಂದು ಸಮರ್ಥಿಸಿಕೊಂಡಿದೆ.

ಪಾಕಿಸ್ತಾನ ಆಸ್ಪತ್ರೆ ಮತ್ತು ನಾಗರಿಕ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದೆ. ಇದು ಮಾನವೀಯತೆ ಇಲ್ಲದ ದಾಳಿಯಾಗಿದ್ದು, ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಆಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯ ವಕ್ತಾರ ಜಬಿವುಲ್ಲಾ ಮುಸ್ತಾಹಿಕ್‌ ಆರೋಪಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments