Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ವಿದೇಶ

ಶಾಲೆ ಮೇಲೆ ಬಿದ್ದ ಬಾಂಗ್ಲಾ ವಾಯುಪಡೆ ವಿಮಾನ: 19 ಮಂದಿ ದುರ್ಮರಣ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 30 ವೀಕ್ಷಣೆಗಳು
bangladesh plane crash

ಬಾಂಗ್ಲಾದೇಶದ ವಾಯುಪಡೆ ಎಫ್-7 ಬಿಜಿಐ ತರಬೇತಿ ವಿಮಾನ ಶಾಲೆಯ ಮೇಲೆ ಪತನಗೊಂಡ ಪರಿಣಾಮ ಪೈಲೆಟ್ ಸೇರಿದಂತೆ 19 ಮಂದಿ ಮೃತಪಟ್ಟಿದ್ದಾರೆ.

ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ನಿಯಂತ್ರಣ ಕಳೆದುಕೊಂಡು ಢಾಕಾದ ಉತ್ತರದಲ್ಲಿರುವ ಮೈಲ್‌ಸ್ಟೋನ್ ಶಿಕ್ಷಣ ಸಂಸ್ಥೆಯ ಕಟ್ಟಡಕ್ಕೆ ಅಪ್ಪಳಿಸಿದೆ.

ಶಾಲೆಯ ಮೇಲೆ ವಿಮಾನ ಬಿದ್ದ ಪರಿಣಾಮ ಇಬ್ಬರು ಶಿಕ್ಷಕರು, 16 ವಿದ್ಯಾರ್ಥಿಗಳು ಹಾಗೂ ಪೈಲೆಟ್ ಸೇರಿ 19 ಮಂದಿ ಅಸುನೀಗಿದ್ದು, 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಬಾಂಗ್ಲಾದೇಶ ಸೇನೆಯ ಸಾರ್ವಜನಿಕ ಸಂಪರ್ಕ ಕಚೇರಿ ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ, ಪತನಗೊಂಡ ಎಫ್-7 ಬಿಜಿಐ ಜೆಟ್ ಬಾಂಗ್ಲಾದೇಶದ ವಾಯುಪಡೆಗೆ ಸೇರಿದ್ದು ಎಂದು ದೃಢಪಡಿಸಿದೆ. ಸದ್ಯ ಘಟನಾ ಸ್ಥಳದಲ್ಲಿ ಮೂರು ಅಗ್ನಿಶಾಮಕ ದಳದ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ತೊಡಗಿಕೊಂಡಿದ್ದಾರೆ.

ಸೋಮವಾರ ಮಧ್ಯಾಹ್ನ 1:06ರ ಸುಮಾರಿಗೆ ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಢಾಕಾದ ಉತ್ತರದ ಮೈಲ್‌ಸ್ಟೋನ್ ಶಿಕ್ಷಣ ಸಂಸ್ಥೆಯ ಕ್ಯಾಂಟೀನ್ ಮೇಲೆ ಪತನಗೊಂಡಿತ್ತು.

ಅಪಘಾತಕ್ಕೀಡಾದ F-7BGI ತರಬೇತಿ ವಿಮಾನವು ಬಾಂಗ್ಲಾದೇಶದ ನಿರ್ವಹಿಸುತ್ತಿರುವ 16 (ಈಗ 15) ವಿಮಾನಗಳಲ್ಲಿ ಒಂದಾಗಿದೆ. ಇದು ಚೀನಾದ J-7 ಯುದ್ಧ ವಿಮಾನದ ಮುಂದುವರಿದ ಆವೃತ್ತಿಯ ವಿಮಾನವಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment