Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ವಿದೇಶ

ಪಾಕಿಸ್ತಾನದ ಕೋರ್ಟ್ ಬಳಿ ಸ್ಫೋಟ: 12 ಮಂದಿ ಸಾವು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 22 ವೀಕ್ಷಣೆಗಳು
pakistan blast

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಕೋರ್ಟ್ ಬಳಿ ಕಾರು ಸ್ಫೋಟಗೊಂಡ 12 ಮಂದಿ ಮೃತಪಟ್ಟಿದ್ದಾರೆ.

ದೆಹಲಿಯ ಕೆಂಪುಕೋಟೆಯಲ್ಲಿ ಕಾರು ಸ್ಫೋಟಗೊಂಡು 12 ಮಂದಿ ಮೃತಪಟ್ಟ ಘಟನೆ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಕಾರು ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ 12 ಮಂದಿ ಮೃತಪಟ್ಟು 25 ಮಂದಿ ಗಾಯಗೊಂಡಿದ್ದಾರೆ.

ಇಸ್ಲಾಮಾಬಾದ್‌ನ ನ್ಯಾಯಾಂಗ ಸಂಕೀರ್ಣದ ಹೊರಗಡೆ ನಿಲ್ಲಿಸಲಾಗಿದ್ದ ಕಾರಿನಲ್ಲಿ ಈ ಸ್ಫೋಟ ಸಂಭವಿಸಿ ವಾಹನ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟದ ಶಬ್ದವು ಹಲವಾರು ಕಿಲೋಮೀಟರ್ ವ್ಯಾಪ್ತಿಯವರೆಗೆ ಕೇಳಿಸಿತ್ತು ಎನ್ನಲಾಗಿದೆ. ಸುತ್ತಮುತ್ತಲಿನ ಕಟ್ಟಡಗಳ ಕಿಟಕಿಗಳು ಪುಡಿಯಾಗಿದ್ದು, ಸುತ್ತಮುತ್ತ ಪ್ರದೇಶದಲ್ಲಿ ಉದ್ವಿಗ್ನತೆಯ ವಾತಾವರಣ ನಿರ್ಮಾಣಗೊಂಡಿದೆ.

ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರಿನಲ್ಲಿ ಅಳವಡಿಸಲಾದ ಗ್ಯಾಸ್ ಸಿಲಿಂಡರ್ ಸ್ಫೋಟವೇ ಈ ದುರಂತಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದು ಯಾವ ರೀತಿಯ ಸ್ಫೋಟ ಎಂದು ನಾವು ಪರಿಶೀಲಿಸುತ್ತಿದ್ದೇವೆ. ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸ್ ವಕ್ತಾರರು ಹೇಳಿದ್ದು, ವಿಧಿವಿಜ್ಞಾನ ತಂಡದಿಂದ ವರದಿ ಬಂದ ನಂತರ ಹೆಚ್ಚಿನ ವಿವರಗಳನ್ನು ನೀಡಲು ಸಾಧ್ಯ ಎಂದಿದ್ದಾರೆ.

ದಾಳಿಯ ಜವಾಬ್ದಾರಿಯನ್ನು ಇಲ್ಲಿಯವರೆಗೆ ಯಾವುದೇ ಗುಂಪು ಹೊತ್ತುಕೊಂಡಿಲ್ಲ. ಮುಂದಿನ ವರ್ಷದ ಆರಂಭದಲ್ಲಿ ಪಾಕಿಸ್ತಾನದಲ್ಲಿ ಚುನಾವಣೆ ನಡೆಯಲಿದ್ದು, ಈ ಗಟನೆಯು ರಾಜಧಾನಿಯಲ್ಲಿ ಭದ್ರತೆಯ ಬಗ್ಗೆ ಕಳವಳ ಹೆಚ್ಚಿಸಿದೆ.

ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ನಡೆದ ಕಾರು ಸ್ಫೋಟದಲ್ಲಿ ಒಟ್ಟು ಹನ್ನೆರಡು ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡ 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ದಾಳಿಗೆ ಉಗ್ರರ ನಂಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ತನಿಖೆ ಚುರುಕುಗೊಂಡಿದೆ. ದೆಹಲಿ ಸೇರಿದಂತೆ ದೇಶದ ಪ್ರಮುಖ ನಗರದಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment