ಲಕ್ನೋ: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ನಡುವೆ, ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್‌ರ ಪೂರ್ವಜರ ಉತ್ತರ ಪ್ರದೇಶದ ಬಾಗಪತ್ ಜಿಲ್ಲೆಯ ಭೂಮಿಯನ್ನು ರೂ. 1.38 ಕೋಟಿಗೆ ಹರಾಜು ಮಾಡಲಾಗಿದೆ.
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಲ್ಲಿ 26 ಅಮಾಯಕರು ಕೊಲ್ಲಲ್ಪಟ್ಟಿದ್ದರು. ಇದಕ್ಕೆ ಪ್ರತಿಯಾಗಿ, ಭಾರತವು ‘ಆಪರೇಷನ್ ಸಿಂಧೂರ್’ ಮೂಲಕ ಪಾಕಿಸ್ತಾನದ ೯ ಭಯೋತ್ಪಾದಕ ನೆಲೆಗಳನ್ನು ಧ್ವಂಸಗೊಳಿಸಿತು. ಎರಡೂ ದೇಶಗಳು ದಾಳಿ-ಪ್ರತಿದಾಳಿಗಳ ನಂತರ ಕದನ ವಿರಾಮ ಒಪ್ಪಂದಕ್ಕೆ ಬಂದವು.
ಶತ್ರು ಆಸ್ತಿ ಇಲಾಖೆಯ ಅಧಿಕಾರಿ ಪ್ರಶಾಂತ್ ಕುಮಾರ್ ಶನಿವಾರ ಲಕ್ನೋದಿಂದ ಬಂದು ಮಾರಾಟ ಪತ್ರವನ್ನು ಪೂರ್ಣಗೊಳಿಸಿದರು. ಬರೌತ್‌ನ ಕೊಟಾನಾ ಗ್ರಾಮದಲ್ಲಿ ಇರುವ ಸುಮಾರು ೧೩ ಬಿಘಾ ಭೂಮಿಯನ್ನು ಶತ್ರು ಆಸ್ತಿ ಎಂದು ಘೋಷಿಸಲಾಗಿದೆ. ಈಗ ಅದು 1.38 ಕೋಟಿ ರೂ.ಗೆ ಮಾರಾಟವಾಗಿದೆ.
ಈ ಭೂಮಿ ಮೊದಲು ಪರ್ವೇಜ್ ಮುಷರಫ್ ಅವರ ಸಹೋದರ ಡಾ. ಜಾವೇದ್ ಮುಷರಫ್ ಮತ್ತು ಅವರ ಕುಟುಂಬದ ಹೆಸರಿನಲ್ಲಿತ್ತು ಆದರೆ 15 ವರ್ಷಗಳ ಹಿಂದೆ ಅದನ್ನು ಶತ್ರು ಆಸ್ತಿಯಾಗಿ ನೋಂದಾಯಿಸಲಾಗಿದೆ.
ಈಗ ಆ ಭೂಮಿಯನ್ನು ಪಂಕಜ್ (ಗುತ್ತಿಗೆದಾರ), ಮನೋಜ್ ಗೋಯಲ್ (ಬರಾವುತ್ ನಿವಾಸಿ) ಮತ್ತು ಗಾಜಿಯಾಬಾದ್‌ನ ಜಿಕೆ ಸ್ಟೀಲ್ ಕಂಪನಿಗೆ ವರ್ಗಾಯಿಸಲಾಗಿದೆ.
ವರ್ಷಗಳ ನಂತರ, ಈ ಆಸ್ತಿಗಳನ್ನು ಶತ್ರು ಆಸ್ತಿಗಳೆಂದು ಪರಿಗಣಿಸಿ ಸರ್ಕಾರಿ ದಾಖಲೆಗಳಲ್ಲಿ ನೋಂದಾಯಿಸಲಾಯಿತು. ಶತ್ರು ಆಸ್ತಿ ಇಲಾಖೆ ಈಗ ಉತ್ತರ ಪ್ರದೇಶದಾದ್ಯಂತ ಅಂತಹ ಆಸ್ತಿಗಳನ್ನು ಹರಾಜು ಹಾಕುತ್ತಿದೆ.
ಮಾರ್ಚ್ 28 ರಂದು 171 ಶತ್ರು ಆಸ್ತಿಗಳನ್ನು ಹರಾಜು ಹಾಕಲಾಗಿದ್ದು, ಇದರಿಂದ ಸರ್ಕಾರಕ್ಕೆ 15 ಕೋಟಿ ರೂ.ಗೂ ಹೆಚ್ಚು ಆದಾಯ ಬಂದಿತ್ತು. ಈ ಆಸ್ತಿ ಲಕ್ಕೋ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹರಡಿಕೊಂಡಿವೆ.
ಪರ್ವೇಜ್ ಮುಷರಫ್ ಅವರ ಕುಟುಂಬವು 1943 ರಲ್ಲಿ ಬರತ್‌ನ ಕೊಟಾನಾ ಗ್ರಾಮದಿಂದ ದೆಹಲಿಗೆ ಸ್ಥಳಾಂತರಗೊಂಡಿತು. ಕೆಲವು ವರ್ಷಗಳ ನಂತರ, 1847ರಲ್ಲಿ ವಿಭಜನೆಯ ಸಮಯದಲ್ಲಿ, ಅವರು ಪಾಕಿಸ್ತಾನಕ್ಕೆ ಹೋಗಿ ನೆಲೆಸಿದರು. ಆದಾಗ್ಯೂ, ಅವರ ಮಹಲು ಮತ್ತು ಕೃಷಿ ಭೂಮಿ ಕೋಟಾದಲ್ಲಿಯೇ ಉಳಿದಿತ್ತು.


