Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ವಿದೇಶ

ನೇಪಾಳ ಮಾಜಿ ಪ್ರಧಾನಿ ಓಲಿ ಅರೆಸ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 30 ವೀಕ್ಷಣೆಗಳು
nepal pm oli

ಕಠ್ಮಂಡು: ಕಳೆದ ವರ್ಷ ದೇಶಾದ್ಯಂತ ನಡೆದಿದ್ದ ಜನರೇಷನ್ ಝಡ್‌ (ಝೆನ್ ಜಿ) ಪ್ರತಿಭಟನೆಗೆ ಸಂಬಂಧಿಸಿ ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರನ್ನು ಬಂಧಿಸಲಾಗಿದೆ,

ಬಾಲೇಂದ್ರ ಶಾ ಹೊಸ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾರನೇ ದಿನವೇ ಓಲಿ ಅವರನ್ನು ನೇಪಾಳ ಪೊಲೀಸರು ಭಕ್ತಪುರದ ಗುಂಡುವಿನಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದರು.

ಗೌರಿಬಹಾದೂರ್ ಕರ್ಕಿ ನೇತೃತ್ವದ ತನಿಖಾ ಆಯೋಗವು ಭದ್ರಾ ಪ್ರದೇಶದಲ್ಲಿ ನಡೆದ ಝೆನ್‌ ಜಿ ಪ್ರತಿಭಟನೆ ಹತ್ತಿಕ್ಕಿದ್ದಕ್ಕಾಗಿ ಓಲಿ ಮತ್ತು ಲೇಖಕ್‌ ಸೇರಿದಂತೆ ಇತರರನ್ನ ತಪ್ಪಿತಸ್ಥರೆಂದು ಘೋಷಿಸಿದೆ. ಅಲ್ಲದೇ ತನಿಖಾ ಆಯೋಗವು ಪ್ರತಿಭಟನೆ ಸಂದರ್ಭದಲ್ಲಿನ ನೇಪಾಳ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಚಂದ್ರ ಕುಬೇರ್ ಖಪುಂಗ್ ಸೇರಿದಂತೆ ಇತರ ಉನ್ನತ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲು ಶಿಫಾರಸು ಮಾಡಿದೆ.

ಶನಿವಾರ ಬೆಳಗ್ಗೆ ಮಾಜಿ ಪ್ರಧಾನಿ ಹಾಗೂ ಮಾಜಿ ಗೃಹಸಚಿವರನ್ನ ಬಂಧಿಸಲಾಗಿದ್ದು, ಕಾನೂನು ಪ್ರಕಾರವೇ ಕ್ರಮ ಮುಂದುವರಿಯುತ್ತದೆ ಎಂದು ಕಠ್ಮಂಡು ಕಣಿವೆ ಪೊಲೀಸ್‌ ಓಂ ಅಧಿಕಾರಿ ತಿಳಿಸಿದ್ದಾರೆ.

ಬಂಧನದ ಬಳಿಕ ಪ್ರತಿಕ್ರಿಯೆ ನೀಡಿರುವ ಹಾಲಿ ಗೃಹಸಚಿವ ಸುಡಾನ್‌ ಗುರುಂಗ್‌, ಭರವಸೆ ಅಂದ್ರೆ ಭರವಸೆ, ಕಾನೂನಿಗಿಂತ ಯಾರೂ ಮೇಲಲ್ಲ ಎಂದು ತಿಳಿಸಿದ್ದಾರೆ. ನಾವು ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮತ್ತು ಮಾಜಿ ಗೃಹಸಚಿವ ರಮೇಶ್‌ ಲೇಖಕ್‌ ಅವರನ್ನ ಬಂಧಿಸಿದ್ದೇವೆ. ಇದು ಯಾರ ವಿರುದ್ಧವೂ ಸೇಡು ತೀರಿಸಿಕೊಳ್ಳುವ ಕ್ರಮವಲ್ಲ.

ನ್ಯಾಯದ ಆರಂಭ ಮಾತ್ರ. ಈಗ ದೇಶವು ಹೊಸ ದಿಕ್ಕಿನತ್ತ ಸಾಗುತ್ತಿದೆ ಎಂದು ನಾನು ನಂಬುತ್ತೇನೆ ಎಂಬುದಾಗಿ ಎಕ್ಸ್‌ ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಸೆಪ್ಟೆಂಬರ್‌ನಲ್ಲಿ ನಡೆದ “ಜನರಲ್-ಝಡ್” ಪ್ರತಿಭಟನೆಗಳನ್ನು ನಿಗ್ರಹಿಸುವ ವೇಳೆ ನಡೆದ ಕ್ರಿಮಿನಲ್ ನಿರ್ಲಕ್ಷ್ಯ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment