Monday, 16 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ವಿದೇಶ

ಭಾರತ, ಪಾಕಿಸ್ತಾನ ಸೇರಿ 5 ದೇಶಗಳ ಹಡುಗಗಳಿಗೆ ಇರಾನ್ ಅನುಮತಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 29 ವೀಕ್ಷಣೆಗಳು
harmuz

ಮುಂಬೈ (ಮಹಾರಾಷ್ಟ್ರ): ಭಾರತ ಹಾಗೂ ಪಾಕಿಸ್ತಾನ ಸೇರಿದಂತೆ 5 ದೇಶಗಳ ಹಡಗುಗಳು ಸಾಗಲು ಹರ್ಮುಜ್ ಜಲಸಂಧಿ ಮುಕ್ತಗೊಳಿಸಿದ್ದಾಗಿ ಇರಾನ್ ಘೋಷಿಸಿದೆ.

ನಮ್ಮ ಸ್ನೇಹಪರ ದೇಶಗಳಿಗೆ ಹಾರ್ಮುಜ್ ಜಲಸಂಧಿಯ ಮೂಲಕ ಹಡಗುಗಳ ಸಂಚಾರಕ್ಕೆ ನಾವು ಅನುಮತಿ ನೀಡಿದ್ದೇವೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಘೋಷಿಸಿ ಟ್ವೀಟ್ ಮಾಡಿದ್ದಾರೆ.

ಭಾರತ ಸೇರಿದಂತೆ ಈ ದೇಶಗಳಿಗೆ ಹಾರ್ಮುಜ್ ಜಲಸಂಧಿ ಮುಕ್ತ: ಈ ಪೋಸ್ಟ್‌ನಲ್ಲಿ ಚೀನಾ, ರಷ್ಯಾ, ಭಾರತ, ಇರಾಕ್ ಮತ್ತು ಪಾಕಿಸ್ತಾನ ಸೇರಿದಂತೆ ಸ್ನೇಹಪರ ದೇಶಗಳಿಗೆ ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಗೆ ನಾವು ಅನುಮತಿ ನೀಡಿದ್ದೇವೆ ಎಂದು ಸಚಿವ ಅಬ್ಬಾಸ್ ಅರಘ್ಚಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಮುಂಬೈನಲ್ಲಿರುವ ಇರಾನ್ ಕಾನ್ಸುಲೇಟ್ ಜನರಲ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಹಾರ್ಮುಜ್ ಜಲಸಂಧಿಯನ್ನು ತೆರೆಯುವಂತೆ ಕರೆ ನೀಡಿದ ಬಳಿಕ ಈ ನಿರ್ಧಾರ ಹೊರಬಂದಿದೆ.

ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಗುಟೆರಸ್ ಅವರು, ಹಾರ್ಮುಜ್ ಜಲಸಂಧಿಯನ್ನು ದೀರ್ಘಕಾಲದವರೆಗೆ ಮುಚ್ಚಿದರೆ ಜಾಗತಿಕ ಬಿತ್ತನೆಯ ಋತುವಿನ ಸಂದರ್ಭದಲ್ಲಿ ತೈಲ, ಅನಿಲ ಮತ್ತು ರಸಗೊಬ್ಬರಗಳ ಚಲನೆಯನ್ನೇ ಉಸಿರುಗಟ್ಟಿಸಿದಂತಾಗುತ್ತದೆ. ಇದು ಈ ಪ್ರದೇಶ ಮತ್ತು ಅದರಾಚೆಗಿನ ಜನರಿಗೆ ಗಂಭೀರ ಹಾನಿ ಮಾಡುತ್ತದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಪಶ್ಚಿಮ ಏಷ್ಯಾ ಯುದ್ಧ ಕೊನೆಗೊಳಿಸುವಂತೆಯೂ ಗುಟೆರೆಸ್ ಅಮೆರಿಕ ಮತ್ತು ಇಸ್ರೇಲ್ ದೇಶಗಳನ್ನು ಒತ್ತಾಯಿಸಿದ್ದಾರೆ. ಮಾನವ ಸಂಕಟ ತೀವ್ರಗೊಳ್ಳುತ್ತಿದೆ. ಸಾವು-ನೋವುಗಳು ಹೆಚ್ಚುತ್ತಿವೆ. ಜಾಗತಿಕ ಆರ್ಥಿಕ ಪರಿಣಾಮ ಹೆಚ್ಚೆಚ್ಚು ವಿನಾಶಕಾರಿಯಾಗುತ್ತಿದೆ. ಹಾಗಾಗಿ, ಯುದ್ಧ ಕೊನೆಗೊಳಿಸುವ ಸಮಯವಿದು. ಸಂಘರ್ಷದಲ್ಲಿ ಪಾತ್ರವಿಲ್ಲದ ತಮ್ಮ ನೆರೆಹೊರೆಯವರ ಮೇಲೆ ದಾಳಿ ನಿಲ್ಲಿಸಬೇಕು ಎನ್ನುವುದು ಇರಾನ್‌ಗೆ ನನ್ನ ಸಂದೇಶ ಎಂದು ಗುಟೆರಸ್ ಮನವಿ ಮಾಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment