Tuesday, 17 November 2026 — Kannadavahini
BREAKING NEWS
ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ
ವಿದೇಶ

ಜೂ.19ರಂದು ಇರಾನ್- ಅಮೆರಿಕ ಶಾಂತಿ ಒಪ್ಪಂದ: ಮಧ್ಯಪ್ರಾಚ್ಯ ಬಿಕ್ಕಟ್ಟು ಅಂತ್ಯ?

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 29 ವೀಕ್ಷಣೆಗಳು
peace deal

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ಕೊನೆಗೂ ಶಾಂತಿ ಒಪ್ಪಂದಕ್ಕೆ ಸಹಮತಕ್ಕೆ ಬಂದಿದ್ದು, ಜೂನ್ 19ರಂದು ಜಿನಿವಾದಲ್ಲಿ ಅಧಿಕೃತವಾಗಿ ಸಹಿ ಹಾಕಲಿವೆ. ಇದರಿಂದ ಮಧ್ಯಪ್ರಾಚ್ಯ ಬಿಕ್ಕಟ್ಟು ಅಂತ್ಯಗೊಳ್ಳಲಿದೆ.

ಇರಾನ್- ಅಮೆರಿಕ ಮತ್ತು ಇಸ್ರೇಲ್ ನಡುವಣ ಸಂಘರ್ಷವನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಜೂನ್ 19ರಂದು ಎರಡೂ ದೇಶಗಳು ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಿವೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

ಫೆಬ್ರುವರಿ 28ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದ್ದವು. ಇದರಿಂದ ಪಶ್ಚಿಮ ಏಷ್ಯಾದಲ್ಲಿ 100ಕ್ಕೂ ಅಧಿಕ ದಿನ ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ವಾತಾವರಣ ನಿರ್ಮಾಣವಾಗಿತ್ತು. ಇದರಿಂದ ಹರ್ಮುಜ್ ಜಲಸಂಧಿ ಮುಕ್ತಗೊಳ್ಳಲಿದ್ದು, ಜಾಗತಿಕವಾಗಿ ಕಾಡುತ್ತಿರುವ ತೈಲ ಹಾಗೂ ಎಲ್ ಪಿಜಿ ಸಮಸ್ಯೆ ಕಾಡ

ಇರಾನ್‌ನೊಂದಿಗಿನ ಕದನ ವಿರಾಮ ಮಾತುಕತೆ ಅಂತಿಮವಾಗಿದ್ದು, ಎಲ್ಲರಿಗೂ ಅಭಿನಂದನೆಗಳು. ಈ ಒಪ್ಪಂದಕ್ಕೆ ಸಹಿ ಹಾಕಿದ ತಕ್ಷಣವೇ ಹೊರ್ಮುಜ್ ಜಲಸಂಧಿ ಮುಕ್ತವಾಗಲಿದೆ ಮತ್ತು ಇರಾನ್ ಬಂದರಿನ ಮೇಲೆ ನಾವು ವಿಧಿಸಿರುವ ನೌಕಾ ದಿಗ್ವಂಧನ ಕೊನೆಗೊಳ್ಳಲಿದೆ ಎಂದು ಸಾಮಾಜಿಕ ಜಾಲತಾಣ ಟ್ರುತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಒಪ್ಪಂದದಿಂದಾಗಿ ಪಶ್ಚಿಮ ಏಷ್ಯಾದ ಭಾಗದಲ್ಲಿ ಶಾಂತಿ ನೆಲೆಸಲಿದೆ. ಈ ಹಿಂದೆ ಅಮೆರಿಕದ ಹಲವು ಅಧ್ಯಕ್ಷರು ಇದಕ್ಕಾಗಿ ಪ್ರಯತ್ನಿಸಿದ್ದರು. ಆದರೆ, ಇದರಲ್ಲಿ ನಾನೊಬ್ಬನೇ ಯಶಸ್ಸು ಕಂಡಿರುವುದು ಎಂದು ಟ್ರಂಪ್ ಹೇಳಿದ್ದಾರೆ.

ಪಾಕ್ ಮತ್ತು ಕತಾರ್ ಮಧ್ಯಸ್ಥಿಕೆಯಲ್ಲಿ ಈ ಒಪ್ಪಂದ ನಡೆದಿದ್ದು, ಜೂನ್ 19ರಂದು ಸ್ವಿಟ್ಸರ್ಲೆಂಡ್‌ನಲ್ಲಿ ಉಭಯ ದೇಶಗಳು ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಿವೆ ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ ಕೂಡ ಹೇಳಿದ್ದಾರೆ.

ಇರಾನ್‌ನ ಉಪ ವಿದೇಶಾಂಗ ಸಚಿವ ಕಜೆಂ ಘರಿಬಾಬಾದಿ, ಅಮೆರಿಕದೊಂದಿಗಿನ ಒಪ್ಪಂದಕ್ಕೆ ಟೆಹರಾನ್ ಸಹಿ ಹಾಕುವುದನ್ನು ಸ್ಪಷ್ಟಪಡಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8422 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment