ವಾಷಿಂಗ್ಟನ್: ಇಸ್ರೇಲ್ ಮತ್ತು ಲೆಬನಾನ್ ದೇಶಗಳು 10 ದಿನಗಳ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಡೊನಾಲ್ಡ್ ಟ್ರಂಪ್, ಕೇವಲ 6 ಗಂಟೆಗಳ ಸಭೆಯಲ್ಲಿ ಇಸ್ರೇಲ್ ಮತ್ತು ಲೆಬನಾನ್ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಹೇಳಿದ್ದರೆ.
ಇಸ್ರೇಲ್ ಮತ್ತು ಲೆಬನಾನ್ ನಡುವೆ 34 ವರ್ಷಗಳ ಕಾಲದ ಯುದ್ಧಕ್ಕೆ ಕದನ ವಿರಾಮ ಘೋಷಣೆ ಆಗಿದೆ. ಇದು ಐತಿಹಾಸಿಕ ನಿರ್ಧಾರ ಎಂದು ಟ್ರಂಪ್ ಹೇಳಿದ್ದಾರೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಮತ್ತು ಲೆಬನಾನ್ ಅಧ್ಯಕ್ಷ ಜೋಸೆಫ್ ಜೊತೆ ಟ್ರಂಪ್ ಚರ್ಚಿಸಿ ಕದನ ವಿರಾಮಕ್ಕೆ ಸಹಮತ ವ್ಯಕ್ತವಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ.


