Friday, December 12, 2025
Google search engine
Homeವಿದೇಶಭಾರತದ ಮೇಲೆ ಶೇ.25ರಷ್ಟು ಸುಂಕ ವಿಧಿಸಿದ ಅಮೆರಿಕ: ಆಗಸ್ಟ್ 1ರಿಂದ ಜಾರಿ!

ಭಾರತದ ಮೇಲೆ ಶೇ.25ರಷ್ಟು ಸುಂಕ ವಿಧಿಸಿದ ಅಮೆರಿಕ: ಆಗಸ್ಟ್ 1ರಿಂದ ಜಾರಿ!

ಭಾರತ ಸರಕು ಸಾಗಾಣೆ ವಸ್ತುಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ ಹೊರಡಿಸಿದ್ದು, ಆಗಸ್ಟ್ 1ರಿಂದ ನೂತನ ಸುಂಕ ಜಾರಿಗೆ ಬರಲಿ ಎಂದು ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷರ ಹೆಸರಿನಲ್ಲಿರುವ ಎಕ್ಸ್ ಖಾತೆಯಲ್ಲಿ ಬುಧವಾರ ಪೋಸ್ಟ್ ಮಾಡಿರುವ ಡೊನಾಲ್ಡ್ ಟ್ರಂಪ್, ರಷ್ಯಾದಿಂದ ದೊಡ್ಡ ಪ್ರಮಾಣದಲ್ಲಿ ತೈಲ ಮತ್ತು ಶಸ್ತ್ರಾಸ್ತ್ರ ಖರೀದಿಸುತ್ತಿರುವ ಸ್ನೇಹಿತ ಭಾರತದ ಮೇಲೆ ಶೇ.25ರಷ್ಟು ತೆರಿಗೆ ವಿಧಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಭಾರತ ನಮ್ಮ ಸ್ನೇಹ ರಾಷ್ಟ್ರ. ಆದರೆ ಬೇರೆ ರಾಷ್ಟ್ರಗಳ ಮೇಲೆ ಅತೀ ಹೆಚ್ಚು ಸುಂಕ ವಿಧಿಸುವ ರಾಷ್ಟ್ರಗಳಲ್ಲಿ ಭಾರತವೂ ಒಂದು. ಯಾವುದೇ ದೇಶದಕ್ಕಿಂತ ಅತ್ಯಂತ ಕಠಿಣ ಮತ್ತು ಕೆಟ್ಟ ವಿತ್ತಿಯ ಅಡೆತಡೆಗಳನ್ನು ಹೊಂದಿದೆ ಎಂದು ಟ್ರಂಪ್ ಕುಟುಕಿದ್ದಾರೆ.

ನಮ್ಮ ಈ ನಿಲುವುಗಳಿಂದ ರಷ್ಯಾ ಯುದ್ಧಕ್ಕೆ ಭಾರತ ಮತ್ತು ಚೀನಾ ಪರೋಕ್ಷವಾಗಿ ನೆರವು ನೀಡುತ್ತಿದೆ. 3 ವರ್ಷಗಳಷ್ಟು ಹಳೆಯದಾದ ಉಕ್ರೇನ್ ಮೇಲಿನ ರಷ್ಯಾ ಯುದ್ಧ ಕೊನೆಗೊಳ್ಳಬಹುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments