Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ವಿದೇಶ

ಅಂತಾರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆಯಿಂದ 2000 ಉದ್ಯೋಗಿಗಳನ್ನು ವಜಾಗೊಳಿಸಿದ ಅಮೆರಿಕ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 22 ವೀಕ್ಷಣೆಗಳು
donald trump

ನ್ಯೂಯಾರ್ಕ್: ಇತರ ದೇಶಗಳಿಗೆ ಅಮೆರಿಕದ ನೆರವು ನಿಲ್ಲಿಸಿರುವ ಅಧ್ಯಕ್ಷ ಟ್ರಂಪ್, ಇದೀಗ, ಅಮೆರಿಕದ ಅಂತಾರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆಯ (ಯುಎಸ್‌ ಏಡ್) ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದ್ದಾರೆ. ಯುಎಸ್‌ಏಡ್ ವೆಬ್ ಸೈಟ್ ನಲ್ಲಿ 2,000 ಉದ್ಯೋಗಿಗಳನ್ನು ವಜಾಗೊಳಿಸಲಾಗುತ್ತಿದೆ ಎಂದು ಪ್ರಕಟಿಸಲಾಗಿದೆ.

ಸಿಬ್ಬಂದಿಗೆ ಬಲವಂತದ ರಜೆ: ಇದರ ಜೊತೆಗೆ, ಪ್ರಪಂಚದಾದ್ಯಂತ ಇರುವ ಸಂಸ್ಥೆಯ ಕೆಲ ಉದ್ಯೋಗಿಗಳನ್ನು ಹೊರತುಪಡಿಸಿ, ಸಾವಿರಾರು ಸಿಬ್ಬಂದಿಗೆ ಬಲವಂತದ ರಜೆ ನೀಡಲಾಗಿದೆ. ಉದ್ಯೋಗಿಗಳ ವಜಾಕ್ಕೆ ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ, ಟ್ರಂಪ್ ಸರ್ಕಾರ ಈ ಕ್ರಮ ಕೈಗೊಂಡಿದೆ.

ಸಿಬ್ಬಂದಿ ವಜಾ ತಡೆಗೆ ಕೋರ್ಟ್ ನಿರಾಕರಣೆ: ಯುಎಸ್ ಏಡ್ ಸಿಬ್ಬಂದಿಯನ್ನು ಸರ್ಕಾರ ವಜಾ ಮಾಡುತ್ತಿರುವುದರ ವಿರುದ್ಧ ತಡೆಯಾಜ್ಞೆ ನೀಡಬೇಕು ಎಂದು ಕೋರಿ ನೌಕರರ ಒಕ್ಕೂಟ ಫೆಡರಲ್ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಆದರೆ, ಇದನ್ನು ನ್ಯಾಯಾಧೀಶೆ ಕಾರ್ಲಾ ನಿಕೋಲ್ಸ್ ನಿರಾಕರಿಸಿದ್ದಾರೆ.

ಅನಗತ್ಯ ಸರ್ಕಾರಿ ವೆಚ್ಚ ಕಡಿಮೆ ಮಾಡಲು ಟ್ರಂಪ್ ಸಲಹೆಗಾರ ಮಸ್ಕ್ ನೇತೃತ್ವದ ಸಮಿತಿಯು ಈಗಾಗಲೇ ಹಲವಾರು USಂIಆ ಉದ್ಯೋಗಿಗಳನ್ನು ವಜಾಗೊಳಿಸಿದೆ.

ಇತ್ತೀಚಿನ ನಿರ್ಧಾರವು ಉಳಿದ ಉದ್ಯೋಗಿಗಳಲ್ಲಿ ಭೀತಿಯನ್ನು ಉಂಟುಮಾಡುತ್ತಿದೆ. ಯುಎಸ್ ಏಡ್ ಸಂಸ್ಥೆಯು ವ್ಯರ್ಥ ವೆಚ್ಚದಾಯಕ ಮತ್ತು ಅದೊಂದು ಕ್ರಿಮಿನಲ್ ಸಂಸ್ಥೆ ಜರಿದಿದ್ದಾರೆ.

ಭಾರತದಲ್ಲಿ ‘ಚುನಾವಣಾ ವ್ಯವಸ್ಥೆ ಸುಧಾರಣೆ’ಗೆ ಅನುದಾನ: ಅಮೆರಿಕದ ಅಂತಾರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆ (ಯುಎಸ್‌ಏಡ್)ಯು ಭಾರತದಲ್ಲಿ ಚುನಾವಣಾ ವ್ಯವಸ್ಥೆ ಸುಧಾರಣೆಗೆ ಅನುದಾನ ನೀಡುತ್ತಿತ್ತು ಎಂದು ಹೇಳಲಾಗಿದೆ.

ಅಮೆರಿಕ ಸರ್ಕಾರವು ಯುಎಸ್ ಏಡ್ ಮೂಲಕ 182 ಕೋಟಿ ರೂಪಾಯಿಗಳನ್ನು ನೀಡಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದು ಭಾರತದಲ್ಲಿ ಬಿರುಗಾಳಿ ಎಬ್ಬಿಸಿದೆ.

ಅಮೆರಿಕದ ವಸ್ತುಗಳಿಗೆ ಅತಿ ಹೆಚ್ಚು ಸುಂಕ ವಿಧಿಸುವ ದೇಶಗಳಲ್ಲಿ ಒಂದಾದ, ಆರ್ಥಿಕವಾಗಿ ಸಶಕ್ತವಾಗಿರುವ ಭಾರತಕ್ಕೆ ನಾವೇಕೆ ಅನುದಾನ ನೀಡಬೇಕು ಎಂದು ಪ್ರಶ್ನಿಸಿರುವ ಟ್ರಂಪ್ ಸರ್ಕಾರ ಯುಎಸ್ ಏಡ್ನಿಂದ ನೀಡಲಾಗುತ್ತಿದ್ದ ನೆರವನ್ನು ನಿಲ್ಲಿಸುವುದಾಗಿ ಘೋಷಿಸಿದೆ.

ಅಮೆರಿಕದ ನೆರವು ಪಡೆದು ಭಾರತದಲ್ಲಿ ನರೇಂದ್ರ ಮೋದಿ ಹೊರತಾದ ಸರ್ಕಾರವನ್ನು ರಚಿಸಲು ಸಂಚು ರೂಪಿಸಲಾಗಿತ್ತು ಎಂದು ಟ್ರಂಪ್ ಆರೋಪಿಸಿದ್ದರು. ಇದು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು. ಜೊತೆಗೆ ಯಾರೆಲ್ಲಾ ಅಮೆರಿಕದ ಅನುದಾನ ಪಡೆದಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಲು ಒತ್ತಾಯ ಕೇಳಿಬಂದಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment