ನಿರ್ಗಮಿತ ಅಧ್ಯಕ್ಷ ಜೋ ಬಿಡೈನ್ 1500 ಕ್ರಿಮಿನಲ್ ಗಳು ಹಾಗೂ 39 ಕ್ರಿಮಿನಲ್ ರಹಿತ ಅಪರಾಧಗಳಲ್ಲಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳಿಗೆ ಕ್ಷಮಾದಾನ ನೀಡಲು ನಿರ್ಧರಿಸಿದ್ದಾರೆ.
ಅಮೆರಿಕದ ಇತಿಹಾಸದಲ್ಲೇ ಮೊದಲ ಬಾರಿ ಇಷ್ಟು ದೊಡ್ಡ ಸಂಖ್ಯೆಯ ಕ್ರಿಮಿನಲ್ ಗಳಿಗೆ ಕ್ಷಮಾದಾನ ನೀಡಿ ಬಿಡುಗಡೆ ಮಾಡಲಾಗುತ್ತಿದೆ.
ದೀರ್ಘಕಾಲದಿಂದ ಜೈಲಿನಲ್ಲಿ ಶಿಕ್ಷೆ ಅನುಭವಿಸಿರುವ 1500 ಕ್ರಿಮಿನಲ್ ಗಳು ಹಾಗೂ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡು ಸುಧಾರಣೆ ಕಂಡಿರುವ 39 ಅಪರಾಧಿಗಳಿಗೆ ಕ್ಷಮಾದಾನ ನೀಡಿ ಬಿಡುಗಡೆ ಮಾಡಲು ಸಂತಸವಾಗುತ್ತಿದೆ ಎಂದು ಬಿಡೈನ್ ಹೇಳಿದ್ದಾರೆ.
ಅಮೆರಿಕದ ಅಧ್ಯಕ್ಷನಾಗಿ ಪಶ್ಚಾತಾಪ ಪಡುತ್ತಿರುವ ಕ್ರಿಮಿನಲ್ ಗಳಿಗೆ ಕ್ಷಮಾದಾನ ನೀಡಲು ಹೆಮ್ಮೆ ಆಗುತ್ತಿದೆ. ಇದು ಪ್ರಜಾಪ್ರಭುತ್ವದ ಶಕ್ತಿಯಾಗಿದೆ ಎಂದು ಬಿಡೈನ್ ಹೇಳಿದ್ದಾರೆ.