Thursday, November 21, 2024
Google search engine
Homeಕ್ರೀಡೆIPL 2024: ಹ್ಯಾಟ್ರಿಕ್ ಗೆಲುವಿನೊಂದಿಗೆ ಅಗ್ರಸ್ಥಾನಕ್ಕೇರಿದ ರಾಜಸ್ಥಾನ್, ಮುಂಬೈಗೆ ಹ್ಯಾಟ್ರಿಕ್ ಸೋಲು

IPL 2024: ಹ್ಯಾಟ್ರಿಕ್ ಗೆಲುವಿನೊಂದಿಗೆ ಅಗ್ರಸ್ಥಾನಕ್ಕೇರಿದ ರಾಜಸ್ಥಾನ್, ಮುಂಬೈಗೆ ಹ್ಯಾಟ್ರಿಕ್ ಸೋಲು

ಸಂಘಟಿತ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್ ತಂಡ 6 ವಿಕೆಟ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಮುಂಬೈನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 9 ವಿಕೆಟ್ ಗೆ 125 ರನ್ ಗಳಿಸಲಷ್ಟೇ ಶಕ್ತವಾಯಿತು. ಸುಲಭ ಗುರಿ ಬೆಂಬತ್ತಿದ ರಾಜಸ್ಥಾನ್ ರಾಯಲ್ಸ್ 15.3 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿ ಅಜೇಯವಾಗಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು. 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾರ್ದಿಕ್ ಪಾಂಡ್ಯ ಸಾರಥ್ಯದಲ್ಲಿ ಮೊದಲ ಮೂರು ಪಂದ್ಯಗಳಲ್ಲೂ ಸೋಲುಂಡು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದೆ.

ರಾಜಸ್ಥಾನ್ ರಾಯಲ್ಸ್ ಪರ ಅದ್ಭುತ ಫಾರ್ಮ್ ನಲ್ಲಿರುವ ರಿಯಾನ್ ಪರಾಗ್ 39 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್ ಸೇರಿದ 54 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವನ್ನು ಟ್ರೆಂಟ್ ಬೌಲ್ಟ್ ಮತ್ತು ಯಜುರ್ವೆಂದ್ರ ಚಾಹಲ್ ತಲಾ 3 ವಿಕೆಟ್ ಪಡೆದು ಕಟ್ಟಿ ಹಾಕಿದರು. ನಂದ್ರೆ ಬರ್ಗರ್ 2 ವಿಕೆಟ್ ಗಳಿಸಿದರು.

ಮುಂಬೈ 20 ರನ್ ಗೆ 4 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಸಿಲುಕಿತು. ಮಧ್ಯಮ ಕ್ರಮಾಂಕದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ (34) ಮತ್ತು ತಿಲಕ್ ವರ್ಮಾ (32) 5ನೇ ವಿಕೆಟ್ ಗೆ 56 ರನ್ ಜೊತೆಯಾಟ ನಿಭಾಯಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments