ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಹಾಗೂ ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಜೈ ಶಾ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜೈ ಶಾ ಡಿಸೆಂಬರ್ 1ರಂದು ಐಸಿಸಿ ಮುಖ್ಯಸ್ಥರಾಗಿ ಪದಗ್ರಹಣ ಮಾಡಲಿದ್ದಾರೆ. ನವೆಂಬರ್ ನಲ್ಲಿ ಹಾಲಿ ಅಧ್ಯಕ್ಷ ಗ್ರೇಕ್ ಬಾರ್ಕಲೆ ಅವರ ಅಧಿಕಾರಾವಧಿ ಪೂರ್ಣಗೊಳ್ಳಲಿದೆ. ಆಗಸ್ಟ್ 20ರಂದು ಮತ್ತೊಂದು ಅವಧಿಗೆ ಆಯ್ಕೆಯಾಗಲು ಬಯಸುವುದಿಲ್ಲ ಎಂದು ಅವರು ಈಗಾಗಲೇ ಸ್ಪಷ್ಟಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಹೊಸ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು.
2028ರ ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆಯಾಗಲಿದ್ದು, ಈ ಸಂದರ್ಭದಲ್ಲಿ ಐಸಿಸಿ ಅಧ್ಯಕ್ಷ ಹುದ್ದೆ ಅತ್ಯಂತ ಮಹತ್ವದ್ದಾಗಿದೆ.
ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ನನಗೆ ಹೆಮ್ಮೆ ಆಗುತ್ತದೆ. ಐಸಿಸಿ ಸದಸ್ಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧದೊಂದಿಗೆ ಕಾರ್ಯ ನಿರ್ವಹಿಸಲು ಸಂತೋಷಪಡುತ್ತೇನೆ ಎಂದು ಜೈ ಶಾ ಹೇಳಿದರು.