ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಹಾಸನದ ಹೊಳೆನರಸೀಪುರದ ಟೌನ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಮೊದಲ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್, ಆರೋಪಿ ಪ್ರಭಾವಿ ಆಗಿರುವುದರಿಂದ ಜಾಮೀನು ನೀಡಿದರೆ ಸಾಕ್ಷ್ಯ ನಾಶ ಅಥವಾ ಪ್ರಭಾವ ಬೀರುವ ಸಾಧ್ಯತೆ ಇದೆ. ಅಲ್ಲದೇ ಪ್ರಕರಣಗಳ ವಿಚಾರಣೆ ಪ್ರಾಥಮಿಕ ಹಂತದಲ್ಲಿರುವುದರಿಂದ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಇದುವರೆಗೆ 4 ಪ್ರಕರಣಗಳು ದಾಖಲಾಗಿದ್ದು, ಏಪ್ರಿಲ್ 26ರಂದು ಲೋಕಸಭಾ ಚುನಾವಣೆ ಬೆನ್ನಲ್ಲೇ ವಿದೇಶಕ್ಕೆ ಹಾರಿದ್ದ ಪ್ರಜ್ವಲ್ ಮೇ 30ರಂದು ತಡರಾತ್ರಿ ಒತ್ತಡದ ಮೇರೆಗೆ ಬೆಂಗಳೂರಿಗೆ ಮರಳಿದ್ದಾಗ ಪೊಲೀಸರು ಬಂಧಿಸಿದ್ದರು.