Friday, August 14, 2026
Google search engine
Homeಕಾನೂನುಜನಾರ್ದನ ರೆಡ್ಡಿಗೆ 7 ವರ್ಷ ಜೈಲು; ಶಾಸಕ ಸ್ಥಾನಕ್ಕೆ ಕುತ್ತು?

ಜನಾರ್ದನ ರೆಡ್ಡಿಗೆ 7 ವರ್ಷ ಜೈಲು; ಶಾಸಕ ಸ್ಥಾನಕ್ಕೆ ಕುತ್ತು?

ಹೈದರಾಬಾದ್: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿಗೆ ಹೈದರಾಬಾದ್ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದರಿಂದ ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಗಂಗಾವತಿ ಶಾಸಕ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ.

ಹೌದು, ಗಣೇಶ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುದೀರ್ಘ ವರ್ಷಗಳಿಂದ ವಿಚಾರಣೆ ನಡೆಸಿದ ನ್ಯಾಯಾಲಯ ಮಂಗಳವಾರ 7 ವರ್ಷ ಶಿಕ್ಷೆಯನ್ನು ಪ್ರಕಟಿಸಿತು.

ನಿಯಮದ ಪ್ರಕಾರ 3 ವರ್ಷಕ್ಕಿಂತ ಹೆಚ್ಚು ವರ್ಷದ ಜೈಲು ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳು ತನ್ನ ಸ್ಥಾನ ಕಳೆದುಕೊಳ್ಳಲಿದ್ದಾರೆ. ಇದೀಗ 7 ವರ್ಷ ಶಿಕ್ಷೆಗೆ ಜನಾರ್ದನ ರೆಡ್ಡಿ ಗುರಿಯಾಗಿರುವುದರಿಂದ ಶಾಸಕ ಸ್ಥಾನ ಕಳೆದುಕೊಳ್ಳಲಿದ್ದಾರೆ.

ಓಬಳಾಪುರಂ ಅಕ್ರಮ ಗಣಿಗಾರಿಕೆ ಮತ್ತು ಗಡಿ ಒತ್ತುವರಿ ಪ್ರಕರಣದಲ್ಲಿ ಈಗಾಗಲೇ 4 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದೇನೆ. ಜನಸೇವೆಯಲ್ಲಿ ತೊಡಗಿಕೊಂಡಿದ್ದೇನೆ. ಗಂಗಾವತಿ ಮತ್ತು ಬಳ್ಳಾರಿ ಕ್ಷೇತ್ರಗಳ ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷೆಯ ಪ್ರಮಾಣ ಕಡಿತ ಮಾಡುವಂತೆ ಜನಾರ್ದನ ರೆಡ್ಡಿ ಮನವಿ ಮಾಡಿದರು.

ಜನಾರ್ದನ ರೆಡ್ಡಿ ಮನವಿಯನ್ನು ತಿರಸ್ಕರಿಸಿದ ನ್ಯಾಯಾಧೀಶರು ನಿಮಗೆ ಜೀವಾವಧಿ ಶಿಕ್ಷೆ ಕೊಡಬೇಕು. 4 ವರ್ಷ ಕಡಿಮೆ ಮಾಡಿ 10 ವರ್ಷ ಜೈಲು ಶಿಕ್ಷೆ ಜಾರಿ ಮಾಡಲೇ ಎಂದು ಅಸಮಾಧಾನ ವ್ಯಕ್ತಪಡಿಸಿ ಜನಾರ್ದನ ರೆಡ್ಡಿ ಪರ ವಕೀಲರ ಮನವಿಯನ್ನು ತಿರಸ್ಕರಿಸಿದರು.

ಜನಾರ್ದನ ರೆಡ್ಡಿ ತೀರ್ಪು ಪ್ರಕಟವಾಗುತ್ತಿದ್ದಂತೆ ಹೈದರಾಬಾದ್ ಗೆ ದೌಡಾಯಿಸಿದರು. ಒಂದು ಕಡೆ ಸಿಬಿಐ ಬಂಧನಕ್ಕೆ ಮುಂದಾಗಿದ್ದರೆ, ಮತ್ತೊಂದೆಡೆ ಜನಾರ್ದನ ರೆಡ್ಡಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಪ್ರಯತ್ನ ನಡೆಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments