Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಜ್ಯೋತಿಷ್ಯ

ಕೆಂಪುಕೋಟೆಯಲ್ಲಿ ಮುತ್ತು ಚೆಲ್ಲಿತಲೇ ಪರಾಕ್: ಮಾಲತೇಶ ದೇವರ ಕಾರ್ಣಿಕ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 573 ವೀಕ್ಷಣೆಗಳು
havery

ಹಾವೇರಿ: ಕೆಂಪುಕೋಟೆಯ ಮೇಲೆ ಮುತ್ತು ಚೆಲ್ಲಿತ್ತಲೇ ಪರಾಕ್’ ಎಂದು ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಗೊರವಯ್ಯ ಎಂಬ ದೈವವಾಣಿ ನುಡಿದಿದ್ದಾರೆ.

ನವರಾತ್ರಿ ಪ್ರಯುಕ್ತ ನಡೆದ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ಈ ಭವಿಷ್ಯ ನುಡಿಯಲಾಗಿದೆ.

ಪ್ರತಿವರ್ಷವೂ ನವರಾತ್ರಿ ಹಬ್ಬದಲ್ಲಿ ಐತಿಹಾಸಿಕ ಮಾಲತೇಶ ಕಾರ್ಣಿಕೋತ್ಸವ ನಡೆಯುತ್ತದೆ. ಈ ಬಾರಿ ದೇವರಗುಡ್ಡದ ಕರಿಯಾಲ್ ಕಟ್ಟಿಯಲ್ಲಿ ನಾಗಪ್ಪ ಅಜ್ಜ ಉರ್ಮಿ ನುಡಿದ ಕಾರ್ಣಿಕ ನುಡಿ ಭಕ್ತರ ಗಮನ ಸೆಳೆದಿದೆ. ಗೊರವಯ್ಯ ಸ್ವಾಮಿ ಒಂಬತ್ತು ದಿನಗಳ ಕಾಲ ಉಪವಾಸ ವೃತ ಕೈಗೊಂಡು 15 ಅಡಿ ಎತ್ತರದ ಬಿಲ್ಲನ್ನೇರಿ ವರ್ಷದ ಕಾರ್ಣಿಕ ನುಡಿದಿದ್ದಾರೆ.

ಕೆಂಪುಕೋಟೆಯ ಮೇಲೆ ಮುತ್ತು ಚೆಲ್ಲಿತ್ತಲೇ ಪರಾಕ್’ ಅನ್ನೋ ದೈವವಾಣಿಯನ್ನು ಗೊರವಯ್ಯ ನುಡಿದಿದ್ದಾರೆ. ಈ ನುಡಿಯ ಪ್ರಕಾರ, ಈ ಬಾರಿ ಮುಂಗಾರು ಮಳೆಯ ಕೊರತೆಯಾಗಿದ್ದು, ಮಳೆಯನ್ನೇ ನಂಬಿ ಕೃಷಿ ಮಾಡಿದ್ದ ಅನ್ನದಾತರಿಗೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆಗಳ ನಿರೀಕ್ಷೆಯಲ್ಲಿದ್ದ ರೈತರಿಗೆ ಮಳೆಯ ಅಭಾವದಿಂದ ಆತಂಕವಾಗಿದೆ. ಆದರೆ ಮುಂಬರುವ ಹಿಂಗಾರು ಮಳೆ ಉತ್ತಮವಾಗುವ ಮತ್ತು ರೈತರು ಸಮೃದ್ಧವಾಗಿ ಬೆಳೆ ಬೆಳೆಯುವ ಆಶಯ ವ್ಯಕ್ತವಾಗಿದೆ. ಮುಂಗಾರು ಕೈಕೊಟ್ಟಿದ್ದರಿಂದ ಕಂಗಾಲಾಗಿರುವ ರೈತರಿಗೆ ಹಿಂಗಾರು ಮಳೆಯಾದರೂ ಕೈಹಿಡಿಯಬಹುದೆಂಬ ನಿರೀಕ್ಷೆ. ಮಳೆ ಉತ್ತಮವಾಗಿ ಸುರಿದು, ಬೆಳೆಗಳು ಸಮೃದ್ಧವಾಗಿ ಬೆಳೆದರೆ ರೈತರ ಸಂಕಷ್ಟಗಳು ದೂರವಾಗಬಹುದು ಎಂಬ ಆಶಾಭಾವನೆ ಮೂಡಿದೆ.

ರಾಜಕೀಯವಾಗಿ ಸಹ ಕಾರ್ಣಿಕ ಕುತೂಹಲ ಮೂಡಿಸಿದೆ. ರಾಜಕೀಯದ ದೃಷ್ಟಿಯಿಂದ ವಿಶ್ಲೇಷಿಸಿರುವ ಪ್ರಧಾನ ಅರ್ಚಕ ಸಂತೋಷಭಟ್ಟ ಗುರೂಜಿ, ಕೆಂಪುಕೋಟೆಯ ಮೇಲೆ ಸಾಧು-ಸಂತರು ಧ್ವಜ ಹಾರಿಸುವ ಕಾಲ ಬರಬಹುದು. ಮುಂದಿನ ದಿನಗಳಲ್ಲಿ ಸಾಧು-ಸಂತರಿಗೆ ದೇಶದ ಆಡಳಿತದಲ್ಲಿ ಪ್ರಮುಖ ಪಾತ್ರ ಸಿಗಬಹುದು. ಸಾಧು-ಸಂತರು ಪ್ರಧಾನಿಯಾಗುವ ಸಾಧ್ಯತೆಯ ಕುರಿತ ಮುನ್ಸೂಚನೆ ಇದರಲ್ಲಿ ಅಡಗಿದೆ ಎಂಬ ವಿಶ್ಲೇಷಣೆ ಮಾಡಿದ್ದಾರೆ.

ದೇವರಗುಡ್ಡದ ಕಾರ್ಣಿಕ ಕೇವಲ ಧಾರ್ಮಿಕ ನಂಬಿಕೆಗೆ ಸೀಮಿತವಾಗದೆ, ರೈತರ ಭವಿಷ್ಯ ಮತ್ತು ದೇಶದ ರಾಜಕೀಯದ ಬೆಳೆವಣಿಗಳ ಮುನ್ಸೂಚನೆ ನೀಡಿದೆ. ಮುಂಗಾರು ಮಳೆ ಕೈಕೊಟ್ಟಿದ್ದು, ಮಾಲತೇಶ ಕೃಪೆಯಿಂದ ಹಿಂಗಾರು ಮಳೆ ಉತ್ತಮವಾಗಿ ಉತ್ತಮ ಫಸಲು ಬಂದರೆ ಸಾಕು ಎನ್ನುತ್ತಿದ್ದಾರೆ ಭಕ್ತರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment